ಉಪ್ಪಲದಿನ್ನಿ ಶ್ರೀ ಸಂಗಮನಾಥ ದೇವರ ದರ್ಶನ ಪಡೆದ ಸಚಿವ ಎಂಬಿಪಿ ; ಗ್ರಾಮದ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ
ವಿಜಯಪುರ, 24 ಜೂನ್ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನ ಸಭಾ ಕ್ಷೇತ್ರದ ಉಪ್ಪಲದಿನ್ನಿ ಗ್ರಾಮದ ಆರಾಧ್ಯ ದೈವವಾದ ಶ್ರೀ ಸಂಗಮನಾಥ ದೇವರ ಸನ್ನಿಧಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಂದರ್ಭದಲ್ಲಿ ಅಪಾರ ಸಂತಸ ಹಾಗೂ ಮನಸ್ಸಿಗೆ ನೆಮ್ಮದಿ ದೊರೆಯಿತು ಎಂದು ಸಚಿವ ಎಂ ಬಿ ಪಾಟೀಲ್ ತಿಳ
Puje


ವಿಜಯಪುರ, 24 ಜೂನ್ (ಹಿ.ಸ.) :

ಆಂಕರ್ : ವಿಜಯಪುರ ಜಿಲ್ಲೆಯ

ಬಬಲೇಶ್ವರ ವಿಧಾನ ಸಭಾ ಕ್ಷೇತ್ರದ ಉಪ್ಪಲದಿನ್ನಿ ಗ್ರಾಮದ ಆರಾಧ್ಯ ದೈವವಾದ ಶ್ರೀ ಸಂಗಮನಾಥ ದೇವರ ಸನ್ನಿಧಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಂದರ್ಭದಲ್ಲಿ ಅಪಾರ ಸಂತಸ ಹಾಗೂ ಮನಸ್ಸಿಗೆ ನೆಮ್ಮದಿ ದೊರೆಯಿತು ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದರು.

ಶ್ರೀ ಸಂಗಮನಾಥ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಜನರ ಸುಖ, ಶಾಂತಿ, ಆರೋಗ್ಯ, ಸಮೃದ್ಧಿ ಹಾಗೂ ನೆಮ್ಮದಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ದೇವರ ಕೃಪಾಕಟಾಕ್ಷದಿಂದ ಎಲ್ಲರ ಜೀವನದಲ್ಲಿ ಒಳಿತು ಹಾಗೂ ಅಭಿವೃದ್ಧಿ ಸದಾ ನೆಲೆಸಲಿ ಎಂದು ಭಕ್ತಿಪೂರ್ವಕವಾಗಿ ಆಶಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮದ ಸ್ಥಳೀಯರು ಹಾಗೂ ದೇವಸ್ಥಾನದ ಸಮಿತಿ ಸದಸ್ಯರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಲಾಯಿತು. ಗ್ರಾಮದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿ, ಜನರ ಸಮಸ್ಯೆಗಳು ಹಾಗೂ ಅಗತ್ಯತೆಗಳ ಬಗ್ಗೆ ಮಾಹಿತಿ ಪಡೆದರು.

ಗ್ರಾಮದ ತಾಯಂದಿರು ಪ್ರೀತಿಯಿಂದ ತಿಲಕವಿರಿಸಿ ಆತ್ಮೀಯ ಸ್ವಾಗತ ಕೋರಿದ ಕ್ಷಣಗಳು ವಿಶೇಷವಾಗಿದ್ದವು. ಗ್ರಾಮಸ್ಥರ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮನಸ್ಸಿಗೆ ಹತ್ತಿರವಾದ ಅನುಭವ ನೀಡಿತು ಎಂದು ತಿಳಿಸಿದರು.

ಶ್ರೀ ಸಂಗಮನಾಥ ದೇವರ ಆಶೀರ್ವಾದದಿಂದ ಉಪ್ಪಲದಿನ್ನಿ ಗ್ರಾಮ ಸೇರಿದಂತೆ ಬಬಲೇಶ್ವರ ಕ್ಷೇತ್ರವು ಮತ್ತಷ್ಟು ಅಭಿವೃದ್ಧಿ ಹೊಂದಲಿ ಎಂಬ ಆಶಯ ವ್ಯಕ್ತಪಡಿಸಲಾಯಿತು. ಗ್ರಾಮದ ಜನರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ಸದಾ ಸಹಕಾರ ನೀಡಲಾಗುವುದು ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande