ಭೀಮಾ ನದಿಗೆ ನೂತನ ಸೇತುವೆ ನಿರ್ಮಾಣಕ್ಕೆ ಚಾಲನೆ : ಕಡಣಿ ಬಳಿ ₹44.50 ಕೋಟಿ ಕಾಮಗಾರಿಗೆ ಶಂಕುಸ್ಥಾಪನೆ
ವಿಜಯಪುರ, 24 ಜೂನ್ (ಹಿ.ಸ.) : ಆಂಕರ್ : ಭೀಮಾ ನದಿ ತೀರದ ಜನರ ದಶಕಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದ್ದು, ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕಡಣಿ ಗ್ರಾಮದ ಸಮೀಪ ಭೀಮಾ ನದಿಗೆ ಅಡ್ಡಲಾಗಿ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದು ಶಾಸಕ ಅಶೋಕ್ ಮನಗೂಳಿ ತಿಳಿಸಿದರು. ಭೀಮಾ
ಸೇತುವೆ


ವಿಜಯಪುರ, 24 ಜೂನ್ (ಹಿ.ಸ.) :

ಆಂಕರ್ : ಭೀಮಾ ನದಿ ತೀರದ ಜನರ ದಶಕಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದ್ದು, ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕಡಣಿ ಗ್ರಾಮದ ಸಮೀಪ ಭೀಮಾ ನದಿಗೆ ಅಡ್ಡಲಾಗಿ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದು ಶಾಸಕ ಅಶೋಕ್ ಮನಗೂಳಿ ತಿಳಿಸಿದರು.

ಭೀಮಾ ನದಿಯಿಂದ ಬೇರ್ಪಟ್ಟಿರುವ ಗ್ರಾಮಗಳ ನಡುವಿನ ಸಂಪರ್ಕ ಸುಗಮಗೊಳಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿರುವ ಈ ಮಹತ್ವದ ಯೋಜನೆಗೆ ₹44.50 ಕೋಟಿ ವೆಚ್ಚ ನಿಗದಿಪಡಿಸಲಾಗಿದೆ. ಸೇತುವೆ ನಿರ್ಮಾಣದಿಂದ ಈ ಭಾಗದ ಜನರ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯುವುದಲ್ಲದೆ, ಕೃಷಿ, ವ್ಯಾಪಾರ ಹಾಗೂ ಆರ್ಥಿಕ ಚಟುವಟಿಕೆಗಳಿಗೂ ಹೆಚ್ಚಿನ ಉತ್ತೇಜನ ದೊರೆಯಲಿದೆ.

ಬಹುದಿನಗಳ ಬೇಡಿಕೆಯಾಗಿದ್ದ ಈ ಯೋಜನೆಯ ಶಂಕುಸ್ಥಾಪನೆ ಸಮಾರಂಭವನ್ನು ಅದ್ಧೂರಿಯಾಗಿ ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಕಡಣಿ ಸೇತುವೆ ನಿರ್ಮಾಣವು ಸಿಂದಗಿ-ಆಲಮೇಲ ಭಾಗದ ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ತರಲಿದ್ದು, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿದೆ. ನದಿ ದಾಟಲು ಜನರು ಎದುರಿಸುತ್ತಿದ್ದ ತೊಂದರೆಗಳು ಕಡಿಮೆಯಾಗಲಿದ್ದು, ವಿದ್ಯಾರ್ಥಿಗಳು, ರೈತರು, ವ್ಯಾಪಾರಿಗಳು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಈ ಯೋಜನೆಯು ಸರ್ಕಾರದ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿದ್ದು, ಭೀಮಾ ನದಿ ತೀರದ ಜನರ ಬಹುದಿನಗಳ ನಿರೀಕ್ಷೆಗೆ ಉತ್ತರ ನೀಡಲಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande