ವಿದ್ಯುತ್ ಖಾಸಗೀಕರಣ ವಿರೋಧಿಸಿ ವೇಮಗಲ್ ನಲ್ಲಿ ಪ್ರತಿಭಟನೆ
ವಿದ್ಯುತ್ ಖಾಸಗೀಕರಣ ವಿರೋಧಿಸಿ ವೇಮಗಲ್ನಲ್ಲಿ ಪ್ರತಿಭಟ ನೆ:
ವಿದ್ಯುತ್ ಖಾಸಗೀಕರಣ ವಿರೋಧಿಸಿ ಕೋಲಾರ ತಾಲ್ಲೂಕಿನ ವೇಮಗಲ್ನಲ್ಲಿ ಪ್ರತಿಭಟನೆ ನಡೆಸಲಾಯಿತು.


ಕೋಲಾರ, ೨೪ ಜೂನ್ (ಹಿ.ಸ) :

ಆ್ಯಂಕರ್ : ಕರ್ನಾಟಕ ರಾಜ್ಯದಲ್ಲಿ ಕೆಇಆರ್ಸಿ ವತಿಯಿಂದ ವಿದ್ಯುತ್ ವಿತರಣಾ ಪರವಾನಗಿಯನ್ನು ಟಾಟಾ ಪವರ್ ಕಂಪನಿಗೆ ನೀಡುವುದನ್ನು ಮತ್ತು ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ವೇಮಗಲ್, ನರಸಾಪುರ ಮತ್ತು ಕ್ಯಾಲನೂರು ಭಾಗದ ಹೋರಾಟಗಾರರು ಹಾಗೂ ನೌಕರರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ಬಯಲು ರಂಗಮ0ದಿರದಿ0ದ ಪ್ರಾರಂಭವಾದ ಪ್ರತಿಭಟನಾ ಜಾಥಾವೂ ವೇಮಗಲ್ ಪೊಲೀಸ್ ಠಾಣೆಯ ಮುಂಭಾಗದ ರಸ್ತೆಯ ಮೂಲಕ ಸಾಗಿ, ರಾಮಶೆಟ್ಟಿ ಸರ್ಕಲ್ನಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿತು. ನಂತರ ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರೊಫೆಸರ್ ನಂಜು0ಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯುಗ ಘಟಕದ ಅಧ್ಯಕ್ಷರಾದ ಕಲ್ವಮಂಜಲಿ ರಾಮು ಶಿವಣ್ಣ, ವಿದ್ಯುತ್ ಕ್ಷೇತ್ರ ಖಾಸಗೀಕರಣವಾದರೆ ರೈತರಿಗೆ ನೀಡುತ್ತಿರುವ ಉಚಿತ ವಿದ್ಯುತ್ ಸಂಪೂರ್ಣ ರದ್ದಾಗಲಿದೆ. ರೈತರ ಕೃಷಿ ಪಂಪ್ಸೆಟ್ಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಲಾಗುತ್ತದೆ. ಬಡವರಿಗೆ ಆಸರೆಯಾಗಿರುವ ಗೃಹಜ್ಯೋತಿ, ಭಾಗ್ಯಜ್ಯೋತಿ, ಕುಟೀರಜ್ಯೋತಿ ಹಾಗೂ ಗಂಗಾ ಕಲ್ಯಾಣದಂತಹ ಪ್ರಮುಖ ಯೋಜನೆಗಳು ರದ್ದಾಗಲಿವೆ ಎಂದು ಎಚ್ಚರಿಸಿದರು.

ಸಣ್ಣ ಕೈಗಾರಿಕೆಗಳಿಗೆ ನೀಡುವ ರಿಯಾಯಿತಿ ದರದ ವಿದ್ಯುತ್ ಸ್ಥಗಿತಗೊಂಡು, ಕಾಲಾಂತರದಲ್ಲಿ ಟಾಟಾ ಕಂಪನಿಯು ತನ್ನಿಷ್ಟದಂತೆ ಹೆಚ್ಚಿನ ದರ ನಿಗದಿ ಮಾಡಲಿದೆ. ಮೊಬೈಲ್ಗೆ ರೀಚಾರ್ಜ್ ಮಾಡುವ ಮಾದರಿಯಲ್ಲಿ ಕೃಷಿ ಪಂಪ್ಸೆಟ್ಗಳಿಗೂ ಮುಂಗಡವಾಗಿ ಹಣ ಪಾವತಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಕೋಟ್ಯಂತರ ರೂಪಾಯಿ ಮೌಲ್ಯದ ಬೆಸ್ಕಾಂ ಆಸ್ತಿ ಖಾಸಗಿ ಕಂಪನಿಯ ಪಾಲಾಗುವುದಲ್ಲದೆ, ರಾಜ್ಯದ ಯುವಜನತೆಗೆ ಸರ್ಕಾರಿ ಉದ್ಯೋಗದ ಅವಕಾಶಗಳು ಕೈತಪ್ಪಲಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಯಾವುದೇ ಕಾರಣಕ್ಕೂ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಬಾರದು, ಬೆಸ್ಕಾಂ ನೌಕರರು, ರೈತರು ಹಾಗೂ ಬಡವರ ಹಿತ ಕಾಯುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಒತ್ತಾಯಿಸಿದ ಹೋರಾಟಗಾರರು, ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿಗಳಾದ ವೆಂಕಟೇಶ್ ಅವರ ಮೂಲಕ ಸಂಬ0ಧಪಟ್ಟ ಕೆಇಆರ್ಸಿ ಕಾರ್ಯದರ್ಶಿಗಳಿಗೆ ಹಾಗೂ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಹೋರಾಟದಲ್ಲಿ ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಅನುಷಾ ಮುನಿರಾಜು, ಸ್ಥಾಯಿ ಸಮಿತಿ ಅಧ್ಯಕ್ಷರಾದ ವಕೀಲ ನಾಗೇಶ್, ಕೌನ್ಸಿಲರ್ಗಳಾದ ಲೋಕೇಶ್, ಮರಿಯಪ್ಪ, ಜೆಸಿಬಿ ರವಿ, ಜೆಸಿಬಿ ರಾಮು, ಶಿಲ್ಪಾ ಶಂಕರ್ ಹಾಗೂ ಕುರುಗಲ್ ರಮೇಶ್ ಮುಖಂಡರಾದ ಜಿ. ನಾರಾಯಣಸ್ವಾಮಿ, ಎಂ.ಐ.ಸಿ.ಟಿ. ಮಂಜುನಾಥ್, ಕಲ್ವಮಂಜಲಿ ಸಿ. ಶಿವಣ್ಣ, ಮಡಿವಾಳ ಮುನಿರಾಜು, ವಿಶ್ವ ನಗರ ಕೃಷ್ಣಯ್ಯ, ಶಬೀರ್, ಕೆಇಬಿ ಚಂದ್ರು, ವೇಮಗಲ್ ಸುಧಾಕರ್, ಕಾರ್ಮಿಕ ಘಟಕದ ಅಧ್ಯಕ್ಷ ನಾಗರಾಜ್, ಭಾಗವಹಿಸದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande