ಬಾಲ್ಯ ವಿವಾಹ,ಬಾಲ ಕಾರ್ಮಿಕ ಪದ್ದತಿ ಕುರಿತು ಅರಿವು ಕಾರ್ಯಕ್ರಮಕ್ಕೆ ಚಾಲನೆ
ಬಾಲ್ಯವಿವಾಹ,ಬಾಲಕಾರ್ಮಿಕ ಪದ್ದತಿ ಕುರಿತು ಅರಿವು ಕಾರ್ಯಕ್ರಮಕ್ಕೆ ಚಾಲನೆ
ಕೋಲಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಬೆಗ್ಲಿಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆದ ಬಾಲಕಾರ್ಮಿಕ ಕಾಯಿದೆ, ಬಾಲ್ಯವಿವಾಹದ ಕುರಿತ ಅರಿವು ಕಾರ್ಯಕ್ರಮಕ್ಕೆ  ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಭು ನೀಲಾಚಾರಿ ಬಡಿಗೇರ ಚಾಲನೆ ನೀಡಿದರು.


ಕೋಲಾರ, ೨೫ ಜೂನ್ (ಹಿ.ಸ) :

ಆ್ಯಂಕರ್ : ಮಕ್ಕಳ ಶಿಕ್ಷಣದ ಹಕ್ಕು ಕಸಿಯದಿರಿ, ಓದುವ ವಯಸ್ಸಿನಲ್ಲಿ ಉದ್ಯೋಗ ಮಾಡಿಸುವುದು ಅಪರಾಧವಾಗಿದ್ದು, ಅಂತಹ ಪ್ರಕರಣ ಕಂಡು ಬಂದರೆ ಕಠಿಣ ಶಿಕ್ಷೆ ವಿಧಿಸಲಾಗುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಭು ನೀಲಾಚಾರಿ ಬಡಿಗೇರ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕಿನ ಬೆಗ್ಲಿ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆ ಆಶ್ರಯದಲ್ಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪದ್ದತಿ ಕುರಿತು ಅರಿವು ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಾಲ್ಯವಿವಾಹ, ಮಾದಕ ವಸ್ತುಗಳ ನಿರ್ಮೂಲನೆ ,ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಿದ ಅವರು, ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗಿ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿರುವ ಪ್ರಕರಣಗಳ ಬಗ್ಗೆ ಅರಿವುಂಟಾಗುವAತೆ ಸಮಾಜಕ್ಕೆ ಸಂದೇಶಗಳನ್ನು ನೀಡುವಂತಾಗಬೇಕು. ಬಾಲ ಕಾರ್ಮಿಕರಾಗಿ ಯಾರೇ ಕೆಲಸ ಮಾಡುತ್ತಿರುವುದು ಕಂಡು ಬಂದರೆ ಕೂಡಲೇ ಗಮನಕ್ಕೆ ತನ್ನಿ ಸಹಾಯವಾಣಿಗೆ ದೂರು ನೀಡಿ ಎಂದ ಅವರು, ಗ್ಯಾರೇಜ್, ಇಟ್ಟಿಗೆ ಕಾರ್ಖಾನೆಗಳಲ್ಲಿ ಹೊರ ರಾಜ್ಯದ ಕಾರ್ಮಿಕರು ತಮ್ಮ ಮಕ್ಕಳನ್ನು ದುಡಿಸುತ್ತಿದ್ದರೆ ಅವರ ಮನವೊಲಿಸಿ ಶಾಲೆಗೆ ಸೇರಿಸುವ ಕೆಲಸವಾಗಬೇಕು. ಬಾಲ್ಯವಿವಾಹದ ಜತೆಗೆ ಮಕ್ಕಳಿಗೆ ಬಾಲ್ಯವಿವಾಹನವೂ ಮಾರಕವಾಗಿದೆ, ಶಾಲೆಗೆ ಹೋಗುವ ಮಕ್ಕಳಿಗೆ ಮದುವೆ ಮಾಡಿದರೆ ಅಂತಹ ಮದುವೆಗೆ ಕಾರಣರಾದ ಪೋಷಕರಿಗೆ ಮಾತ್ರವಲ್ಲ, ಪುರೋಹಿತರಿಗೆ, ಮದುವೆಗೆ ಹೋದ ಎಲ್ಲರಿಗೂ ಶಿಕ್ಷೆ ಖಚಿತ ಎಂದು ಎಚ್ಚರಿಕೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಎಲ್.ಶ್ರೀನಿವಾಸ್ ಮಾತನಾಡಿ, ಚಾಕೋಲೇಟ್ಗಳಲ್ಲಿ ಹೇರಾಯಿನ್, ಕೋಕಾ, ಮುಂತಾದ ಅಮಲು, ನಿಶೆ ಬರುವ ವಸ್ತುಗಳನ್ನು ಮಿಶ್ರಣ ಮಾಡಿ ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಮಾದಕ ವ್ಯಸನಿಗಳನ್ನಾಗಿ ಮಾಡಿ ಕೊನೆಗೆ ಅವರನ್ನು ಸಮಾಜಘಾತುಕ, ಕಾನೂನು ಬಾಹಿರಾ ಕೃತ್ಯಗಳಲ್ಲಿ ತೊಡಗುವಂತೆ ಮಾಡುವ ಷಡ್ಯಂತ್ರ ನಡೆದಿದೆ ಎಂದು ವಿಷಾದಿಸಿದರು.

ಇದೇ ಸಂದರ್ಭದಲ್ಲಿ ಎನ್ಎಲ್ಎಸ್ಎ ಸಹಾಯವಾಣಿ ೧೫೧೦೦ ಬಳಕೆ ಕುರಿತು ನ್ಯಾಯಾಧೀಶರು ಮಾಹಿತಿ ನೀಡಿದರು.

ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ಎಂ.ಮುನೇಗೌಡ ಮಾತನಾಡಿ, ಬಾಲ ಕಾರ್ಮಿಕರ ರಕ್ಷಣೆಗಾಗಿಯೇ ಇಲಾಖೆ ಇದೆ ಎಂದ ಅವರು,ಶಾಲೆ ಕಾಲೇಜು ಆವರಣದಿಂದ ೨೦೦ ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಷೇಧವಿದೆ, ಒಂದೆರಡು ವರ್ಷ ಕಷ್ಟಪಟ್ಟು ಓದಿ ಇಡೀ ಜೀವನ ಸುಖಕರವಾಗಿರುವಂತೆ ಬಾಳಿ, ಕೇವಲ ಶೈಕ್ಷಣಿಕ ಸುಖದ ಆಸೆಗಾಗಿ ದುಶ್ಚಟಗಳಿಗೆ ಬಲಿಯಾದರೆ ಇಡೀ ಜೀವನ ನರಕವಾದೀತು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಶಿಕ್ಷಕಿ ಹೆಚ್.ಎಂ.ಗಾಯತ್ರಿ ಮಾತನಾಡಿ, ಓದುವ ವಯಸ್ಸಿನಲ್ಲಿ ಮದುವೆ ಮಾಡಿ ಅವರ ಜೀವನ ಹಾಳು ಮಾಡುವ ಘಟನೆಗಳು ಕಂಡು ಬಂದರೆ ಗಮನಕ್ಕೆ ತನ್ನಿ ಎಂದರು.

ಚಿಕ್ಕ ವಯಸ್ಸಿನಲ್ಲಿ ಮದುವೆಯಾದರೆ ಆರೋಗ್ಯ ದೃಷ್ಟಿಯಿಂದಲೂ ಮಾರಕ ಎಂದು ಎಚ್ಚರಿಸಿದ ಅವರು, ಚೆನ್ನಾಗಿ ಓದಿ ಸಾಧಕರಾಗಿ ಹೊರಹೊಮ್ಮಿ, ನಿಮಗಾಗಿ ಸರ್ಕಾರ ಅನೇಕ ಸೌಲಭ್ಯಗಳನ್ನು ಒದಗಿಸಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ಆದರ್ಶ್, ಇಸಿಒ ನಂಜುAಡಗೌಡ, ಪಿಡಿಒ ಸೋಮೇಶ್ವರ್, ವಕೀಲರಾದ ಕೆ.ಮಂಜು, ಚೌಡೇಗೌಡ, ನಾರಾಯಣಸ್ವಾಮಿ, ಪ್ರೌಢಶಾಲೆಯ ಎಸ್ಡಿಎಂಸಿ ಅಧ್ಯಕ್ಷೆ ಶಶಿಕಲಾ,ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ವೆಂಕಟೇಶಮೂರ್ತಿ, ಎಸ್ಡಿಎಂಸಿ ಅಧ್ಯಕ್ಷೆ ಅನಿತಾ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande