ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ಘೋಷಣೆ ; ಕೇಂದ್ರ ಸರ್ಕಾರಕ್ಕೆ ಸಿಎಂಆರ್ ಶ್ರೀನಾಥ್ ಕೃತಜ್ಞತೆ
ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ಘೋಷಣೆ ; ಕೇಂದ್ರ ಸರ್ಕಾರಕ್ಕೆ ಸಿಎಂಆರ್ ಶ್ರೀನಾಥ್ ಕೃತಜ್ಞತೆ
ಸಿಎಂಆರ್ ಶ್ರೀನಾಥ್


ಕೋಲಾರ, ೨೫ ಜೂನ್ (ಹಿ.ಸ) :

ಆ್ಯಂಕರ್ : ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ತೀವ್ರ ಸಂಕಷ್ಟದ ಸಮಯದಲ್ಲಿ ಮೊದಲು ಧ್ವನಿ ಎತ್ತುವುದೇ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಹೆಚ್.ಡಿ. ಕುಮಾರಸ್ವಾಮಿ. ಈ ಸಲವೂ ಮಾವು ಬೆಳೆಗಾರರು ಬೆಲೆ ಇಲ್ಲದೆ ಕಂಗಲಾಗಿದ್ದಾಗ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ನಿರಂತರ ಪ್ರಯತ್ನದ ಫಲ ಹಾಗೂ ಮಾವು ಬೆಳೆಗಾರರು-ಜೆಡಿಎಸ್ ಮುಖಂಡರ ಹೋರಾಟದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ತೋತಾಪುರಿ ಮಾವಿಗೆ ಪ್ರತಿ ಕ್ವಿಂಟಲ್ಗೆ ೧,೭೫೦ ಸಹಾಯಧನ ಘೋಷಿಸಿರುವ ಕೇಂದ್ರ ಸರ್ಕಾರದ ನಿರ್ಧಾರದಿಂದ ಬೆಲೆ ಕುಸಿತ ಮತ್ತು ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ದೊಡ್ಡ ಮಟ್ಟದ ನೆರವು ದೊರೆಯಲಿದೆ ಎಂದು ಹೇಳಿದ್ದಾರೆ.

ಮಾವು ಬೆಳೆಗಾರರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಕುಮಾರಸ್ವಾಮಿ ಅವರು ಜೂನ್ ೧೭ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ರೈತರ ಪರವಾಗಿ ಮನವಿ ಮಾಡಿದ್ದರು. ಅಲ್ಲದೆ, ನವದೆಹಲಿಯಲ್ಲಿ ಕೃಷಿ ಸಚಿವರನ್ನು ಭೇಟಿ ಮಾಡಿ ರೈತರ ಸಂಕಷ್ಟದ ಬಗ್ಗೆ ಮನವರಿಕೆ ಮಾಡಿಕೊಟ್ಟ ಪರಿಣಾಮ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಿ ನೆರವು ಘೋಷಿಸಿದೆ ಎಂದು ಶ್ರೀನಾಥ್ ತಿಳಿಸಿದ್ದಾರೆ.

ಕೋಲಾರ ಸೇರಿದಂತೆ ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳ ಸಾವಿರಾರು ರೈತರಿಗೆ ಈ ಯೋಜನೆಯಿಂದ ಪ್ರಯೋಜನವಾಗಲಿದೆ. ರೈತರ ಸಂಕಷ್ಟದ ಸಮಯದಲ್ಲಿ ಅವರ ಬೆನ್ನಿಗೆ ನಿಂತಿರುವ ಕೇಂದ್ರ ಸರ್ಕಾರ ಹಾಗೂ ಕುಮಾರಸ್ವಾಮಿ ಅವರ ಕಾರ್ಯವನ್ನು ಅಭಿನಂದಿಸುವುದಾಗಿ ಅವರು ಹೇಳಿದ್ದಾರೆ. ರಾಜ್ಯದ ರೈತರ ಹಿತಾಸಕ್ತಿಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿರುವ ಕುಮಾರಸ್ವಾಮಿ ಅವರ ಬದ್ಧತೆಯೇ ಈ ನೆರವಿನ ಘೋಷಣೆಗೆ ಕಾರಣವಾಗಿದೆ ಎಂದಿದ್ದಾರೆ.

ಕುಮಾರಸ್ವಾಮಿ ಅವರ ನಿರಂತರವಾಗಿ ರೈತರ ಪರ ಧ್ವನಿ ಎತ್ತುತ್ತಿರುವುದರಿಂದ ರಾಜ್ಯದ ರೈತರು ಉಸಿರಾಡುವಂತೆ ಆಗಿದೆ. ಕಳೆದ ವರ್ಷವೂ ಸಹ ಮಾವು ಬೆಳೆಗಾರರ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಸಹಾಯಧನ ಘೋಷಣೆ ಮಾಡಿಸಿದ್ದರು. ಅದೇ ರೀತಿ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಟಮೋಟೋ ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ಸಂಕಷ್ಟದಲ್ಲಿದ್ದಾಗ ಬೆಂಬಲ ಬೆಲೆ ಘೋಷಣೆ ಮಾಡಿದ್ದು ಅಲ್ಲದೆ ತಕ್ಷಣವೇ ಸಹಾಯಧನ ಬಿಡುಗಡೆ ಮಾಡಿ ರೈತರನ್ನು ಸಂಕಷ್ಟದಿAದ ಪಾರು ಮಾಡಿದ್ದನ್ನ ಸಿಎಂಆರ್ ಶ್ರೀನಾಥ್ ಸ್ಮರಿಸಿದರು.

ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ತೀವ್ರ ಸಂಕಷ್ಟದಲ್ಲಿದ್ದಾಗ ಮೊದಲು ಧ್ವನಿ ಎತ್ತುವುದೇ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮತ್ತು ಕುಮಾರಸ್ವಾಮಿ. ಕೋಲಾರ ಜಿಲ್ಲೆಗೆ ಶಾಶ್ವತ ನೀರಾವರಿ ಕಲ್ಪಿಸುವ ಉದ್ದೇಶದಿಂದ ಯರಗೋಳ್ ಯೋಜನೆಗೆ ಚಾಲನೆ ಕೊಟ್ಟಿದ್ದರು. ಶಾಶ್ವತ ಕುಡಿಯುವ ನೀರು ಕಲ್ಪಿಸಲು ಕೃಷ್ಣ ನದಿ ನೀರನ್ನು ಅವಿಭಜಿತ ಜಿಲ್ಲೆಗೆ ಹರಿಸುವಂತೆ ಕೋಲಾರ ಸಂಸದ ಎಂ.ಮಲ್ಲೇಶ್ಬಾಬು ಅವರ ಜೊತೆಗೂಡಿ ಆಂದ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಮನವಿ ಕೂಡ ಸಲ್ಲಿಸಿದನ್ನ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಸ್ಮರಿಸಿದರು.

ಮಾವಿಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಮಾವು ಬೆಳೆಗಾರರು ಮತ್ತು ಜೆಡಿಎಸ್ ಪಕ್ಷ ಕೋಲಾರ-ಶ್ರೀನಿವಾಸಪುರದಲ್ಲಿ ಪ್ರತಿಭಟನೆ ಮಾಡಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಸಂಸದ ಎಂ.ಮಲ್ಲೇಶ್ ಬಾಬು, ಜೆಡಿಎಸ್ ಪಕ್ಷದ ಹಿರಿಯ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಸೇರಿ ಪ್ರತಿಭಟನೆ ಮಾಡಿದ್ದು ಅಲ್ಲದೆ ಸರ್ಕಾರಗಳಿಗೆ ಎಚ್ಚರಿಕೆ ಕೊಟ್ಟಿದ್ದರು.

ತೋತಾಪುರಿಯ ಒಂದು ಕ್ವಿಂಟಾಲ್ಗೆ ೧೭೫೦ ರೂ.ಗಳನ್ನ ಕೇಂದ್ರ ಸರ್ಕಾರದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ನಿಗಧಿ ಮಾಡಿದ್ದಾರೆ. ಮಾವು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೂ ರೈತರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಅಭಿನಂದನೆ ಸಲ್ಲಿಸಿದ್ದಾರೆ.

ಕೇಂದ್ರ ಸರ್ಕಾರ ತೋತಾಪುರ ಮಾವಿಗೆ ಒಂದು ಕ್ವಿಂಟಾಲ್ಎ ೧೭೫೦ ರು.ಗಳನ್ನ ನಿಗಧಿ ಮಾಡಿ ರೈತರ ಪರ ನಿಂತಿದೆ. ಆದರೆ ರಾಜ್ಯ ಸರ್ಕಾರ ಇದುವರೆವಗೂ ರೈತರ ಸಮಸ್ಯೆಯನ್ನು ಆಲಿಸುತ್ತಿಲ್ಲ, ಈಗಾಗಲೇ ಜಿಲ್ಲಾಡಳಿತ ರಾಜ್ಯ ಸರ್ಕಾರಕ್ಕೆ ವರಧಿಯನ್ನು ಕೊಟ್ಟಿದೆ. ಇಷ್ಠಾದರೂ ರಾಜ್ಯ ಸರ್ಕಾರ ಇಲ್ಲಿಯವರೆಗೂ ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾವು ಬೆಳೆಗಾರರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಿಎಂಆರ್ ಶ್ರೀನಾಥ್ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande