
ಕೋಲಾರ, ೨೬ ಜೂನ್ (ಹಿ.ಸ) :
ಆ್ಯಂಕರ್ : ಮಾದಕ ವಸ್ತು ಬಳಕೆ ಮತ್ತು ಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ಡ್ರಗ್ ಫ್ರೀ ಕೆ.ಜಿ.ಎಫ್ ಅಭಿಯಾನದಡಿ ಇಂದು ಕೆ.ಜಿ.ಎಫ್ ಪೊಲೀಸ್ ಜಿಲ್ಲಾ ವತಿಯಿಂದ ಸಾರ್ವಜನಿಕರಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಯಿತು.
ಈ ಜಾಗೃತಿ ಜಾಥಾವು ರಾಬರ್ಟ್ಸನ್ಪೇಟೆ, ಆಂಡ್ರಸನ್ಪೇಟೆಯ ನಗರದ ಪ್ರಮುಖ ರಸ್ತೆಗಳಲ್ಲಿ ಮತ್ತು ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳು, ಅಕ್ರಮ ಮಾದಕ ವಸ್ತು ಸಾಗಾಣಿಕೆ ತಡೆ, ಯುವಜನತೆಯಲ್ಲಿ ವ್ಯಸನಮುಕ್ತ ಜೀವನದ ಮಹತ್ವ ಹಾಗೂ ಸಮಾಜದಲ್ಲಿ ಮಾದಕ ವಸ್ತುಗಳಿಗೆ ಅವಕಾಶ ನೀಡದಂತೆ ಜಾಗೃತಿ ಮೂಡಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಮಾತನಾಡಿ, ಮಾದಕ ವಸ್ತುಗಳ ವ್ಯಸನವು ವ್ಯಕ್ತಿಯ ಆರೋಗ್ಯ, ಕುಟುಂಬ ಮತ್ತು ಸಮಾಜದ ನೆಮ್ಮದಿಯನ್ನು ಹಾಳುಮಾಡುತ್ತದೆ. ಯುವಕರು ಯಾವುದೇ ರೀತಿಯ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದೆ ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು. ಸಾರ್ವಜನಿಕರು ತಮ್ಮ ಸುತ್ತಮುತ್ತ ಮಾದಕ ವಸ್ತುಗಳ ಮಾರಾಟ, ಸಾಗಾಣಿಕೆ ಅಥವಾ ಬಳಕೆಯ ಬಗ್ಗೆ ಮಾಹಿತಿ ದೊರೆತಲ್ಲಿ ತಕ್ಷಣವೇ ಕೆ.ಎಸ್.ಪಿ ಆಫ್ ಮೂಲಕ ಪೊಲೀಸ್ ಇಲಾಖೆಗೆ ಮಾಹಿತಿ ತಿಳಿಸಲು ಮನವಿ ಮಾಡಿದರು.
ಈ ವಾರವನ್ನು “ಮಾದಕ ವಸ್ತುಗಳ ವಿರೋಧಿ ಸಪ್ತಾಹ” ಎಂದು ಆಚರಿಸುತ್ತಿದ್ದು ಡ್ರಗ್ ಫ್ರೀ ಕೆ.ಜಿ.ಎಫ್ ಅಭಿಯಾನದ ಮೂಲಕ ಸಾರ್ವಜನಿಕರಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಮಾದಕ ವಸ್ತುಗಳ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು. ಪೋಷಕರು ತಮ್ಮ ಮಕ್ಕಳ ಚಟುವಟಿಕೆಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಹಾಗೂ ವಿದ್ಯಾರ್ಥಿಗಳು, ಯುವಜನರು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ವ್ಯಸನಗಳಿಂದ ದೂರವಿರಬೇಕೆಂದು ಕರೆ ನೀಡಲಾಯಿತು.
ಜಾಗೃತಿ ಜಾಥಾದಲ್ಲಿ ಡಿವೈಎಸ್ಪಿ ಲಕ್ಷö್ಮಯ್ಯ.ವಿ, ಸರ್ಕಲ್ ಇನ್ಸ್ಪೆಕ್ಟರ್ಗಳಾದ ಅನಿಲ್ಕುಮಾರ್ ಎಂ.ಎಸ್, ಹರೀಶ್ ಆರ್, ಜಗದೀಶ್ ಎಸ್.ಆರ್, ಆರ್.ಪಿ.ಐ ಸೋಮಶೇಖರ್. ವಿ ಮತ್ತು ಪೊಲೀಸ್ ಠಾಣೆಗಳ ಸಬ್-ಇನ್ಸ್ಪೆಕ್ಟರ್ಗಳು ಹಾಗೂ ಪೊಲೀಸ್ ಸಿಬ್ಬಂದಿ ಭಾಗವಹಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್