15 ಲಕ್ಷ ಗಿಡ ನೆಡುವ ಮಹತ್ವಾಕಾಂಕ್ಷಿ ಅಭಿಯಾನ
ಬೆಂಗಳೂರು, 27 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರು ನಗರವನ್ನು ಹಸಿರುಮಯ, ಪರಿಸರ ಸ್ನೇಹಿ ಹಾಗೂ ಸುಸ್ಥಿರ ನಗರವನ್ನಾಗಿ ರೂಪಿಸುವ ಉದ್ದೇಶದಿಂದ, ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಇಂದು ಒಂದೇ ದಿನ 15 ಲಕ್ಷ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಾಡಪ್ರಭು ಕೆಂಪೇಗೌಡ ಬಡಾವಣ
ಅಭಿಯಾನ


ಬೆಂಗಳೂರು, 27 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ನಗರವನ್ನು ಹಸಿರುಮಯ, ಪರಿಸರ ಸ್ನೇಹಿ ಹಾಗೂ ಸುಸ್ಥಿರ ನಗರವನ್ನಾಗಿ ರೂಪಿಸುವ ಉದ್ದೇಶದಿಂದ, ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಇಂದು ಒಂದೇ ದಿನ 15 ಲಕ್ಷ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ - 5 ಲಕ್ಷ ಗಿಡಗಳು, ಬಿಡಿಎ ಅಭಿವೃದ್ಧಿಪಡಿಸಿರುವ ಇತರೆ ಬಡಾವಣೆಗಳು ಹಾಗೂ ರಸ್ತೆ ಬದಿಗಳಲ್ಲಿ - 10 ಲಕ್ಷ ಗಿಡಗಳು ಮಾವು, ಹಲಸು, ಬೇವು, ವಿವಿಧ ಹಣ್ಣಿನ ಗಿಡಗಳು, ನೆರಳು ನೀಡುವ ಗಿಡಗಳು ಸೇರಿದಂತೆ ಸುಮಾರು 350ಕ್ಕೂ ಹೆಚ್ಚು ಜಾತಿಯ ದೇಶೀಯ ಹಾಗೂ ಔಷಧೀಯ ಸಸ್ಯಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆ, ಅಂತರ್ಜಲ ವೃದ್ಧಿ ಹಾಗೂ ಆರೋಗ್ಯಕರ ಜೀವನಶೈಲಿಗೆ ಉತ್ತೇಜನ ನೀಡುವ ಉದ್ದೇಶ ಹೊಂದಲಾಗಿದೆ.

ಒಂದು ಮನೆ, ಒಂದು ಔಷಧಿ ಗಿಡ ಎಂಬ ಧೈಯದೊಂದಿಗೆ ಈ ಅಭಿಯಾನ ರೂಪುಗೊಂಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande