ಢೋಂಗಿತನ ಮಾಡುವ ಬಿಜೆಪಿಗರಿಂದ ರಾಮ ಮಂದಿರಕ್ಕೇ ಕನ್ನ : ಅಶೋಕ ಮಂದಾಲಿ ಆರೋಪ
ಗದಗ, 27 ಜೂನ್ (ಹಿ.ಸ.) : ಆ್ಯಂಕರ್ : ಹಿಂದೂತ್ವ ಮತ್ತು ಶ್ರೀರಾಮನ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿ ನಾಯಕರು ಈಗ ರಾಮ ಮಂದಿರಕ್ಕೆ ಭಕ್ತರು ನೀಡಿರುವ ಕಾಣಿಕೆ ಹಣವನ್ನೇ ಲೂಟಿ ಮಾಡುವ ಮೂಲಕ ಭಕ್ತರ ನಂಬಿಕೆಗೆ ದ್ರೋಹ ಎಸಗಿದ್ದಾರೆ ಎಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ
ಫೋಟೋ


ಗದಗ, 27 ಜೂನ್ (ಹಿ.ಸ.) :

ಆ್ಯಂಕರ್ : ಹಿಂದೂತ್ವ ಮತ್ತು ಶ್ರೀರಾಮನ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿ ನಾಯಕರು ಈಗ ರಾಮ ಮಂದಿರಕ್ಕೆ ಭಕ್ತರು ನೀಡಿರುವ ಕಾಣಿಕೆ ಹಣವನ್ನೇ ಲೂಟಿ ಮಾಡುವ ಮೂಲಕ ಭಕ್ತರ ನಂಬಿಕೆಗೆ ದ್ರೋಹ ಎಸಗಿದ್ದಾರೆ ಎಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಮ ಮಂದಿರದ ದೇಣಿಗೆ ಹಣದಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿರುವ ಆರೋಪಗಳು ಕೇಳಿಬಂದಿರುವುದು ದೇಶದಾದ್ಯಂತ ಭಕ್ತರನ್ನು ಬೆಚ್ಚಿಬೀಳಿಸಿದೆ. ಇದು ಕೇವಲ ಹಣದ ದುರುಪಯೋಗವಲ್ಲ, ಭಕ್ತರ ಧಾರ್ಮಿಕ ನಂಬಿಕೆ ಮತ್ತು ಭಾವನೆಗಳಿಗೆ ಮಾಡಿದ ಅಪಚಾರವಾಗಿದೆ ಎಂದು ಆರೋಪಿಸಿದರು.

ದೇಣಿಗೆ ಹಣ ಕೇವಲ ಲಕ್ಷಗಳಲ್ಲಿ ಕಾಣೆಯಾಗಿಲ್ಲ. ಸುಮಾರು 4,500 ಕೋಟಿ ರೂಪಾಯಿಗೂ ಅಧಿಕ ಹಣ ದುರುಪಯೋಗವಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ರಾಮನ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ ನಾಯಕರು ಈ ಪ್ರಕರಣದ ನೈತಿಕ ಹೊಣೆ ಹೊತ್ತು ಉತ್ತರಿಸಬೇಕು ಎಂದು ಅವರು ಒತ್ತಾಯಿಸಿದರು.

ತಿಂಗಳಿಗೆ ಕೇವಲ 20 ಸಾವಿರ ರೂಪಾಯಿ ಸಂಬಳ ಪಡೆಯುವ ಸಿಬ್ಬಂದಿ ಕೆಲವೇ ವರ್ಷಗಳಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಸಂಪಾದಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇಂತಹ ಅಸಹಜ ಆಸ್ತಿ ಗಳಿಕೆಯನ್ನು ಬಿಜೆಪಿ ನಾಯಕರು ಗಮನಿಸದಿರುವುದು ಅಥವಾ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿರುವುದು ಇಡೀ ಪ್ರಕರಣದ ಮೇಲೆ ಮತ್ತಷ್ಟು ಅನುಮಾನ ಹುಟ್ಟಿಸಿದೆ ಎಂದು ಅವರು ಆರೋಪಿಸಿದರು.

ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಕೆಲ ಸಿಬ್ಬಂದಿಯ ಬಳಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಗಳು, ನಗದು ಹಣ ಹಾಗೂ ಭೂಮಿ ಪತ್ತೆಯಾಗಿರುವುದು ತನಿಖೆಯ ಗಂಭೀರತೆಯನ್ನು ಸೂಚಿಸುತ್ತದೆ. ಆದರೂ ಹಿರಿಯ ಅಧಿಕಾರಿಗಳು ಮತ್ತು ಟ್ರಸ್ಟ್ನ ಪ್ರಮುಖರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದ್ದು, ಕೆಳಹಂತದ ಸಿಬ್ಬಂದಿಯನ್ನು ಮಾತ್ರ ಬಲಿಪಶು ಮಾಡಲಾಗುತ್ತಿದೆ ಎಂದು ಅಶೋಕ ಮಂದಾಲಿ ದೂರಿದರು.

2025ರ ಮಹಾಕುಂಭ ಮೇಳದ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ನೀಡಿದ ದೇಣಿಗೆ ಹಣದ ನಿರ್ವಹಣೆಯಲ್ಲಿ ಗಂಭೀರ ಲೋಪಗಳು ನಡೆದಿವೆ ಎಂದು ಅವರು ಆರೋಪಿಸಿದರು. ಕೋಟ್ಯಂತರ ರೂಪಾಯಿ ನಗದು ನಿರ್ವಹಿಸುವ ಸಿಬ್ಬಂದಿಗೆ ಅಗತ್ಯ ಭದ್ರತಾ ಕ್ರಮಗಳು, ಪಾಕೆಟ್-ಲೆಸ್ ಯೂನಿಫಾರ್ಮ್, ಕಟ್ಟುನಿಟ್ಟಿನ ತಪಾಸಣೆ, ಜಿಪಿಎಸ್ ಅಳವಡಿಸಿದ ಸುರಕ್ಷಿತ ವಾಹನಗಳ ವ್ಯವಸ್ಥೆ ಸೇರಿದಂತೆ ಮೂಲಭೂತ ನಿಯಮಗಳನ್ನೂ ಜಾರಿಗೊಳಿಸಿಲ್ಲ ಎಂದು ಟೀಕಿಸಿದರು.

ಈ ಭದ್ರತಾ ವೈಫಲ್ಯವೇ ಕಾಣಿಕೆ ಹಣ ಲೂಟಿಯಾಗಲು ಪ್ರಮುಖ ಕಾರಣವಾಗಿದೆ. ಭಕ್ತರ ಶ್ರದ್ಧೆಯಿಂದ ನೀಡಿದ ಹಣವನ್ನು ರಕ್ಷಿಸುವಲ್ಲಿ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಅವರು ಹೇಳಿದರು.

ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಆಡಳಿತದಲ್ಲೇ ರಾಮ ಮಂದಿರದ ಕಾಣಿಕೆ ಹಣಕ್ಕೆ ಕನ್ನ ಬಿದ್ದಿರುವುದು ಆಡಳಿತ ವೈಫಲ್ಯದ ಸ್ಪಷ್ಟ ಉದಾಹರಣೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಸ್ವತಂತ್ರ ತನಿಖೆಗೆ ಹಿಂಜರಿಕೆ ಏಕೆ?

ಜೂನ್ 23, 2026ರಂದು ಎಸ್ಐಟಿ ತಂಡವು 150 ಪುಟಗಳ ವರದಿಯನ್ನು ಉತ್ತರ ಪ್ರದೇಶ ಗೃಹ ಕಾರ್ಯದರ್ಶಿಗೆ ಸಲ್ಲಿಸಿದರೂ ಈವರೆಗೆ ಯಾವುದೇ ಎಫ್ಐಆರ್ ದಾಖಲಾಗಿಲ್ಲ ಎಂದು ಅಶೋಕ ಮಂದಾಲಿ ಆರೋಪಿಸಿದರು. ವಿರೋಧ ಪಕ್ಷಗಳ ವಿರುದ್ಧ ಸಿಬಿಐ ಹಾಗೂ ಇಡಿ ತನಿಖೆ ನಡೆಸುವ ಬಿಜೆಪಿ, ಈ ಪ್ರಕರಣದಲ್ಲಿ ಮಾತ್ರ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಡಿ ಸ್ವತಂತ್ರ ತನಿಖೆಗೆ ಮುಂದಾಗುತ್ತಿಲ್ಲ. ತಪ್ಪು ಮಾಡಿಲ್ಲದಿದ್ದರೆ ಸ್ವತಂತ್ರ ತನಿಖೆಗೆ ಒಪ್ಪಿಕೊಳ್ಳಲು ಹಿಂಜರಿಕೆ ಏಕೆ ಎಂಬ ಪ್ರಶ್ನೆಗೆ ಬಿಜೆಪಿ ಉತ್ತರ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande