ಶ್ರೀರಾಮ ಜನ್ಮಭೂಮಿ ಚಂಪತ್ ರಾಯ್, ಅನಿಲ್ ಮಿಶ್ರಾ ರಾಜೀನಾಮೆ ; ಮುಂದಿನ ಸಭೆಯಲ್ಲಿ ನಿರ್ಧಾರ
ಲಖನೌ, 27 ಜೂನ್ (ಹಿ.ಸ.) : ಆ್ಯಂಕರ್ : ಅಯೋಧ್ಯೆಯ ಶ್ರೀರಾಮ ಮಂದಿರದ ಕಾಣಿಕೆ ನಿರ್ವಹಣೆಗೆ ಸಂಬಂಧಿಸಿದ ವಿವಾದದ ನಡುವೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಮಹಾಸಚಿವ ಚಂಪತ್ ರಾಯ್ ಹಾಗೂ ಟ್ರಸ್ಟಿ ಅನಿಲ್ ಮಿಶ್ರಾ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ರಾಜೀನಾಮೆಗಳ ಕುರಿತು ಟ್ರಸ್ಟ್ನ ಮುಂದ
ರಾಮ ಜನ್ಮಭೂಮಿ ಟ್ರಸ್ಟ್ ಪತ್ರಿಕಾ ಪ್ರಕಟಣೆ


ಲಖನೌ, 27 ಜೂನ್ (ಹಿ.ಸ.) :

ಆ್ಯಂಕರ್ : ಅಯೋಧ್ಯೆಯ ಶ್ರೀರಾಮ ಮಂದಿರದ ಕಾಣಿಕೆ ನಿರ್ವಹಣೆಗೆ ಸಂಬಂಧಿಸಿದ ವಿವಾದದ ನಡುವೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಮಹಾಸಚಿವ ಚಂಪತ್ ರಾಯ್ ಹಾಗೂ ಟ್ರಸ್ಟಿ ಅನಿಲ್ ಮಿಶ್ರಾ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ರಾಜೀನಾಮೆಗಳ ಕುರಿತು ಟ್ರಸ್ಟ್ನ ಮುಂದಿನ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಟ್ರಸ್ಟ್ನ ಖಜಾಂಚಿ ಸ್ವಾಮಿ ಗೋವಿಂದದೇವ ಗಿರಿ ತಿಳಿಸಿದ್ದಾರೆ.

ಶನಿವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಸ್ವಾಮಿ ಗೋವಿಂದದೇವ ಗಿರಿ, ಇತ್ತೀಚಿನ ದಿನಗಳಲ್ಲಿ ಶ್ರೀರಾಮ ಮಂದಿರಕ್ಕೆ ಸಂಬಂಧಿಸಿದ ಘಟನೆಗಳು ತಮಗೆ ತೀವ್ರ ಆಘಾತ ಮತ್ತು ದುಃಖವನ್ನುಂಟು ಮಾಡಿವೆ ಎಂದು ಹೇಳಿದ್ದಾರೆ. ರಾಮಭಕ್ತರು ಹಾಗೂ ರಾಮಸೇವಕರ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಟ್ರಸ್ಟ್, ಈ ಪ್ರಕರಣದ ನ್ಯಾಯಸಮ್ಮತ ತನಿಖೆ ನಡೆಸಿ ಭಕ್ತರಲ್ಲಿ ವಿಶ್ವಾಸ ಮೂಡಿಸಲು ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಅವರು, ಭಕ್ತರು ಬೆಳ್ಳಿಯ ಇಟ್ಟಿಗೆಗಳು, ಚಿನ್ನಾಭರಣಗಳು ಸೇರಿದಂತೆ ಶ್ರೀರಾಮನ ಸೇವೆಗೆ ಅರ್ಪಿಸಿದ ಎಲ್ಲಾ ಕಾಣಿಕೆಗಳು ಸಮರ್ಪಕ ಲೆಕ್ಕಪತ್ರಗಳೊಂದಿಗೆ ಸುರಕ್ಷಿತವಾಗಿವೆ ಎಂದು ಭರವಸೆ ನೀಡಿದ್ದಾರೆ.

ಮಂದಿರದ ದೇಣಿಗೆ ಪೆಟ್ಟಿಗೆಗಳಿಂದ ಸಂಗ್ರಹವಾದ ಹಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಟ್ರಸ್ಟ್ನ ಮನವಿಯ ಮೇರೆಗೆ ಉತ್ತರ ಪ್ರದೇಶ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ (ಎಸ್ಐಟಿ) ಸಲ್ಲಿಸಿರುವ ಮಧ್ಯಂತರ ವರದಿಯ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಪ್ರಕರಣದಲ್ಲಿ ಕಾನೂನು ಕ್ರಮ ಮುಂದುವರಿದಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಟ್ರಸ್ಟ್ ಒತ್ತಾಯಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ, ಕೆಲವು ಸಮಾಜವಿರೋಧಿ ಹಾಗೂ ಸ್ವಾರ್ಥಿ ಶಕ್ತಿಗಳು ಈ ವಿವಾದವನ್ನು ಬಳಸಿಕೊಂಡು ಸನಾತನ ಧರ್ಮಕ್ಕೆ ಕಳಂಕ ತರುವ ಪ್ರಯತ್ನ ನಡೆಸುತ್ತಿವೆ ಎಂದು ಆರೋಪಿಸಿರುವ ಅವರು, ಅಂತಹ ಪ್ರಯತ್ನಗಳು ಯಶಸ್ವಿಯಾಗಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳು ಹಾಗೂ ಇತರ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಆಧಾರರಹಿತ ವದಂತಿಗಳನ್ನು ನಂಬಬಾರದು ಹಾಗೂ ಇತರರನ್ನೂ ಅವುಗಳಿಂದ ದೂರವಿರಿಸುವಂತೆ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಸತ್ಯ ಶೀಘ್ರದಲ್ಲೇ ಬಹಿರಂಗವಾಗಲಿದ್ದು, ವಿವಾದದ ಎಲ್ಲಾ ಅನುಮಾನಗಳು ದೂರವಾಗಲಿವೆ ಎಂಬ ವಿಶ್ವಾಸವನ್ನು ಟ್ರಸ್ಟ್ ವ್ಯಕ್ತಪಡಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande