
ಬೆಂಗಳೂರು, 27 ಜೂನ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಅಂಗವಾಗಿ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭಾಗವಹಿಸಿ ಕೆಂಪೇಗೌಡರಿಗೆ ಗೌರವ ನಮನ ಸಲ್ಲಿಸಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಉಪರಾಷ್ಟ್ರಪತಿಗಳು, ಕೆಂಪೇಗೌಡರನ್ನು ಕೇವಲ ಆಡಳಿತಗಾರನಾಗಿ ಮಾತ್ರವಲ್ಲದೆ, ಜನರ ಕಲ್ಯಾಣಕ್ಕಾಗಿ ದೂರದೃಷ್ಟಿಯೊಂದಿಗೆ ಆಡಳಿತ ನಡೆಸಿದ ಮಹಾನ್ ನಾಯಕನಾಗಿ ಇತಿಹಾಸ ಸ್ಮರಿಸುತ್ತದೆ ಎಂದು ಹೇಳಿದರು.
ರೈತರು, ವ್ಯಾಪಾರಿಗಳು, ಕುಶಲಕರ್ಮಿಗಳು, ವಿದ್ವಾಂಸರು ಹಾಗೂ ವಿವಿಧ ಧರ್ಮಗಳ ಜನರು ಸಮಾನವಾಗಿ ವಾಸಿಸಿ, ಅಭಿವೃದ್ಧಿ ಹೊಂದುವ ಸಮಗ್ರ ನಗರವನ್ನು ನಿರ್ಮಿಸುವ ಕನಸನ್ನು ಕೆಂಪೇಗೌಡರು ಕಂಡಿದ್ದರು ಎಂದು ಅವರು ಹೇಳಿದರು. ಇಂದಿನ ಬೆಂಗಳೂರು ಆ ದೂರದೃಷ್ಟಿಯ ಜೀವಂತ ಪ್ರತೀಕವಾಗಿದ್ದು, ಮಿನಿ ಭಾರತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಪ್ರತಿ ಪಕ್ಷ ನಾಯಕ ಆರ್. ಅಶೋಕ, ಸಿ.ಎನ್. ಅಶ್ವತ್ಥ ನಾರಾಯಣ, ಎ.ಎಸ್. ನಿರ್ಮಲಾನಂದನಾಥ ಮಹಾಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.