ವಿಜಯಪುರದಲ್ಲಿ ಎಲೆಕ್ಟ್ರಾನಿಕ್ಸ್ ಕ್ರಾಂತಿಗೆ ಚಾಲನೆ ; ಉತ್ತರ ಕರ್ನಾಟಕದ ಮೊದಲ ಪಿಸಿಬಿ ಮೆಗಾ ಘಟಕ ಸ್ಥಾಪನೆಗೆ ಮುನ್ನುಡಿ
ವಿಜಯಪುರ, 27 ಜೂನ್ (ಹಿ.ಸ.) : ಆಂಕರ್ : ಬಸವನಾಡು ವಿಜಯಪುರ ಜಿಲ್ಲೆ ಕೈಗಾರಿಕಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲುಗಲ್ಲು ಸಾಧಿಸಲು ಸಜ್ಜಾಗಿದೆ. ಉತ್ತರ ಕರ್ನಾಟಕದ ಪ್ರಥಮ ಪಿಸಿಬಿ (Printed Circuit Board - PCB) ಎಲೆಕ್ಟ್ರಾನಿಕ್ಸ್ ಉತ್ಪಾದನಾ ಘಟಕ ಸ್ಥಾಪನೆಗೆ ಮುಂದಾಗಿದ್ದು, ಜಿಲ್ಲೆಯ ಕೈಗಾ
ಕೈಗಾರಿಕೆ


ವಿಜಯಪುರ, 27 ಜೂನ್ (ಹಿ.ಸ.) :

ಆಂಕರ್ : ಬಸವನಾಡು ವಿಜಯಪುರ ಜಿಲ್ಲೆ ಕೈಗಾರಿಕಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲುಗಲ್ಲು ಸಾಧಿಸಲು ಸಜ್ಜಾಗಿದೆ. ಉತ್ತರ ಕರ್ನಾಟಕದ ಪ್ರಥಮ ಪಿಸಿಬಿ (Printed Circuit Board - PCB) ಎಲೆಕ್ಟ್ರಾನಿಕ್ಸ್ ಉತ್ಪಾದನಾ ಘಟಕ ಸ್ಥಾಪನೆಗೆ ಮುಂದಾಗಿದ್ದು, ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿಗೆ ಹೊಸ ದಿಕ್ಕು ದೊರೆಯಲಿದೆ ಎಂದು ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ವಿಜಯಪುರದಲ್ಲಿ ನಿರ್ಮಾಣಗೊಳ್ಳಲಿರುವ ಈ ಮಹತ್ವಾಕಾಂಕ್ಷಿ ಇಂಟಿಗ್ರೇಟೆಡ್ ಪಿಸಿಬಿ ಮೆಗಾ ಕ್ಯಾಂಪಸ್ (Integrated PCB Mega Campus) ಸುಮಾರು 100 ಎಕರೆ ವಿಸ್ತೀರ್ಣದಲ್ಲಿ ರೂಪುಗೊಳ್ಳಲಿದ್ದು, ಕರ್ನಾಟಕದ ಎಲೆಕ್ಟ್ರಾನಿಕ್ಸ್ ಉತ್ಪಾದನಾ ವಲಯದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಲಿದೆ.

ಈ ಐತಿಹಾಸಿಕ ಯೋಜನೆಗೆ ಸ್ವಾಗತ ವ್ಯಕ್ತಪಡಿಸಿರುವ ಮುಖಂಡರು, ಉತ್ತರ ಕರ್ನಾಟಕದ ಕೈಗಾರಿಕಾ ಬೆಳವಣಿಗೆಗೆ ಇದು ಪ್ರಮುಖ ಹೆಜ್ಜೆಯಾಗಲಿದೆ ಎಂದು ಹೇಳಿದ್ದಾರೆ. ಪಿಸಿಬಿ ಉತ್ಪಾದನಾ ಘಟಕದಿಂದ ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದ್ದು, ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಹೊಸ ಕೌಶಲ್ಯ ಮತ್ತು ತಂತ್ರಜ್ಞಾನ ಅಭಿವೃದ್ಧಿಗೆ ಸಹಕಾರಿಯಾಗಲಿದೆ.

ಒಂದು ಕಾಲದಲ್ಲಿ ಬರದ ಸಂಕಷ್ಟಕ್ಕೆ ಹೆಸರಾಗಿದ್ದ ವಿಜಯಪುರ ಜಿಲ್ಲೆ, ಕಳೆದ ಕೆಲವು ವರ್ಷಗಳಲ್ಲಿ ಜಲ ಕ್ರಾಂತಿ, ಹಸಿರು ಕ್ರಾಂತಿ, ಶಿಕ್ಷಣ ಕ್ಷೇತ್ರದ ಬೆಳವಣಿಗೆ ಹಾಗೂ ಇದೀಗ ಉದ್ಯೋಗ ಕ್ರಾಂತಿಯ ಮೂಲಕ ತನ್ನದೇ ಆದ ಹೊಸ ಗುರುತನ್ನು ನಿರ್ಮಿಸುತ್ತಿದೆ. ಕೃಷಿ ಆಧಾರಿತ ಆರ್ಥಿಕತೆಯ ಜೊತೆಗೆ ಕೈಗಾರಿಕಾ ಹೂಡಿಕೆಗಳನ್ನು ಆಕರ್ಷಿಸುವ ಮೂಲಕ ಜಿಲ್ಲೆ ಅಭಿವೃದ್ಧಿಯ ಹೊಸ ಪಥದಲ್ಲಿ ಸಾಗುತ್ತಿದೆ.

TerraCircuits ಸಂಸ್ಥೆ ಹಾಗೂ ಮುರಳಿ ಶ್ರೀನಿವಾಸ ಅವರ ನೇತೃತ್ವದ ತಂಡಕ್ಕೆ ಅಭಿನಂದನೆ ಸಲ್ಲಿಸಲಾಗಿದ್ದು, ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಸರ್ಕಾರದ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಲಾಗಿದೆ.

ವಿಜಯಪುರ ಜಿಲ್ಲೆ ಈಗ ಎಲೆಕ್ಟ್ರಾನಿಕ್ಸ್, ನವೀಕರಿಸಬಹುದಾದ ಇಂಧನ, ಪಾನೀಯ ಉದ್ಯಮ ಹಾಗೂ ಸುಧಾರಿತ ಉತ್ಪಾದನಾ ಕ್ಷೇತ್ರಗಳಲ್ಲಿ ಹೂಡಿಕೆಗಳನ್ನು ಸೆಳೆಯುವ ಮೂಲಕ ಉತ್ತರ ಕರ್ನಾಟಕದ ಪ್ರಮುಖ ಕೈಗಾರಿಕಾ ಕೇಂದ್ರವಾಗಿ ಬೆಳೆಯುತ್ತಿದೆ.

ಈ ಪಿಸಿಬಿ ಮೆಗಾ ಕ್ಯಾಂಪಸ್ ಭಾರತದ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮಾನದಂಡ ಸ್ಥಾಪಿಸುವ ವಿಶ್ವಾಸ ವ್ಯಕ್ತವಾಗಿದ್ದು, ನಾವೀನ್ಯತೆ, ಉದ್ಯೋಗ ಸೃಷ್ಟಿ ಮತ್ತು ಸಮಗ್ರ ಅಭಿವೃದ್ಧಿಗೆ ಇದು ಪೂರಕವಾಗಲಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande