
ಸೇಲಂ, 28 ಜೂನ್ (ಹಿ.ಸ.) :
ಆ್ಯಂಕರ್ : ತಮಿಳು ನಾಡಿನ ಸೇಲಂನಲ್ಲಿ ತಮಿಳುನಾಡು ವೀರಶೈವ ಕೌನ್ಸಿಲ್ ಹಾಗೂ ಚೀಫ್ ಜಂಗಮ್ ಸೋಶಿಯಲ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಬಸವ ಜಯಂತಿ ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಹಾಗೂ ಕರ್ನಾಟಕ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಗಜ್ಯೋತಿ ಬಸವಣ್ಣನವರ ಸಮಾನತೆ, ಕಾಯಕ, ದಾಸೋಹ ಹಾಗೂ ಮಾನವೀಯ ಮೌಲ್ಯಗಳ ಸಂದೇಶವು ಇಂದಿನ ಸಮಾಜಕ್ಕೂ ಮಾರ್ಗದರ್ಶಕವಾಗಿದೆ ಎಂದು ಅವರು ಹೇಳಿದರು. ಬಸವಣ್ಣನವರು ಪ್ರತಿಪಾದಿಸಿದ ತತ್ವಗಳು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೇ, ಸಮಸ್ತ ಮಾನವಕುಲಕ್ಕೆ ದಾರಿದೀಪವಾಗಿವೆ ಎಂದು ಅಭಿಪ್ರಾಯಪಟ್ಟರು.
ಬಸವಣ್ಣನವರ ಆದರ್ಶಗಳು ಹಾಗೂ ಅವರ ಸಾಮಾಜಿಕ ಸಂದೇಶವನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಮಾಜದಲ್ಲಿ ಸೌಹಾರ್ದತೆ, ಸಮಾನತೆ ಮತ್ತು ಸೇವಾ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.