ಪಲ್ಸ್ ಪೋಲಿಯೋ ಅಭಿಯಾನಕ್ಕೆ ಮುಖ್ಯಮಂತ್ರಿ ಚಾಲನೆ
ಬೆಂಗಳೂರು, 28 ಜೂನ್ (ಹಿ.ಸ.) : ಆ್ಯಂಕರ್ : ಎರಡು ಹನಿ ಜೀವ ರಕ್ಷಕ, ಪೋಲಿಯೋ ಮುಕ್ತ ಸಮಾಜಕ್ಕೆ ನಮ್ಮ ಸಂಕಲ್ಪ ಎಂಬ ಘೋಷಣೆಯೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದರು. ಈ ಸಂದರ್ಭದಲ್
Polio cm


ಬೆಂಗಳೂರು, 28 ಜೂನ್ (ಹಿ.ಸ.) :

ಆ್ಯಂಕರ್ : ಎರಡು ಹನಿ ಜೀವ ರಕ್ಷಕ, ಪೋಲಿಯೋ ಮುಕ್ತ ಸಮಾಜಕ್ಕೆ ನಮ್ಮ ಸಂಕಲ್ಪ ಎಂಬ ಘೋಷಣೆಯೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರೊಂದಿಗೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ, ದೇಶದ ಆರೋಗ್ಯವಂತ ಭವಿಷ್ಯ ನಮ್ಮ ಮಕ್ಕಳ ಕೈಯಲ್ಲಿದ್ದು, ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೇ ಪೋಲಿಯೋ ಲಸಿಕೆ ನೀಡಿಸುವುದು ಪ್ರತಿಯೊಬ್ಬ ಪೋಷಕರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ಎರಡು ಹನಿ ಜೀವ ರಕ್ಷಕ ಎಂಬ ಸಂದೇಶವನ್ನು ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಂಡು, ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

ರಾಜ್ಯಾದ್ಯಂತ ನಡೆಯುತ್ತಿರುವ ಈ ಪಲ್ಸ್ ಪೋಲಿಯೋ ಅಭಿಯಾನದ ಮೂಲಕ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಉಚಿತವಾಗಿ ಪೋಲಿಯೋ ಲಸಿಕೆ ನೀಡಲಾಗುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಸಮೀಪದ ಲಸಿಕಾ ಕೇಂದ್ರಗಳಿಗೆ ಕರೆತಂದು ಲಸಿಕೆ ಹಾಕಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮನವಿ ಮಾಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande