ಅವಳಿ ಸುರಂಗ ಮಾರ್ಗಕ್ಕೆ ಮುಖ್ಯಮಂತ್ರಿ ಶಂಕುಸ್ಥಾಪನೆ
ಬೆಂಗಳೂರು, 28 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯ ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆಯನ್ನು ತಗ್ಗಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ಹೆಬ್ಬಾಳ ಫ್ಲೈಓವರ್ನಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಬ್ಬಂದಿ ವಸತಿಗೃಹದವರೆಗೆ ನಿರ್ಮಿಸಲಾಗುವ ಮೂರು ಪಥಗಳ ಅವಳಿ ಸುರಂಗ ಮಾರ್ಗಕ್ಕೆ ಇಂದು ಮುಖ್ಯಮಂತ್ರಿ
foundation stone


ಬೆಂಗಳೂರು, 28 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯ ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆಯನ್ನು ತಗ್ಗಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ಹೆಬ್ಬಾಳ ಫ್ಲೈಓವರ್ನಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಬ್ಬಂದಿ ವಸತಿಗೃಹದವರೆಗೆ ನಿರ್ಮಿಸಲಾಗುವ ಮೂರು ಪಥಗಳ ಅವಳಿ ಸುರಂಗ ಮಾರ್ಗಕ್ಕೆ ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ಬೈರತಿ ಸುರೇಶ್ ಹಾಗೂ ಶಾಸಕರು ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಎನ್. ಎ. ಹ್ಯಾರಿಸ್ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ, ವೇಗವಾಗಿ ವಿಸ್ತರಿಸುತ್ತಿರುವ ಬೆಂಗಳೂರಿಗೆ ಸುಸ್ಥಿರ, ಆಧುನಿಕ ಹಾಗೂ ಜನಸ್ನೇಹಿ ಮೂಲಸೌಕರ್ಯಗಳ ನಿರ್ಮಾಣ ಅತ್ಯಗತ್ಯವಾಗಿದೆ ಎಂದು ಹೇಳಿದರು. ಈ ಅವಳಿ ಸುರಂಗ ಮಾರ್ಗ ಯೋಜನೆ ಪೂರ್ಣಗೊಂಡ ಬಳಿಕ ಹೆಬ್ಬಾಳ ಭಾಗದ ಸಂಚಾರ ದಟ್ಟಣೆ ಗಮನಾರ್ಹವಾಗಿ ಕಡಿಮೆಯಾಗಲಿದ್ದು, ಪ್ರಯಾಣಿಕರ ಸಮಯ ಉಳಿತಾಯವಾಗುವುದರ ಜೊತೆಗೆ ಲಕ್ಷಾಂತರ ಜನರ ದೈನಂದಿನ ಸಂಚಾರ ಮತ್ತಷ್ಟು ಸುಗಮವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುರಂಗ ಮಾರ್ಗವು ಹೆಬ್ಬಾಳ ಫ್ಲೈಓವರ್ನಿಂದ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣದ ಮೂಲಕ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಸಿಬ್ಬಂದಿ ವಸತಿಗೃಹದವರೆಗೆ ನಿರ್ಮಾಣವಾಗಲಿದ್ದು, ಮೂರು ಪಥಗಳ ಅವಳಿ ಸುರಂಗ ವ್ಯವಸ್ಥೆಯನ್ನು ಹೊಂದಿರುತ್ತದೆ. ಯೋಜನೆ ಪೂರ್ಣಗೊಂಡ ಬಳಿಕ ನಗರದ ಉತ್ತರ ಭಾಗದ ವಾಹನ ಸಂಚಾರಕ್ಕೆ ವೇಗ ಸಿಗುವ ನಿರೀಕ್ಷೆಯಿದ್ದು, ಬೆಂಗಳೂರು ನಗರದ ಸುಸ್ಥಿರ ಸಾರಿಗೆ ವ್ಯವಸ್ಥೆ ಅಭಿವೃದ್ಧಿಗೆ ಇದು ಪ್ರಮುಖ ಮೈಲಿಗಲ್ಲಾಗಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande