
ಕೋಲಾರ, ೨೮ ಜೂನ್ (ಹಿ.ಸ) :
ಆ್ಯಂಕರ್ : ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ಹಾಗೂ ಎಲ್.ಜಿ ಫೌಂಡೇಷನ್ ವತಿಯಿಂದ ಪತ್ರಕರ್ತರ ಮಕ್ಕಳಿಗೆ ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಪರಿಕರಗಳ ವಿತರಣಾ ಕಾರ್ಯಕ್ರಮವನ್ನು ಸೋಮವಾರ ಬೆಳಿಗ್ಗೆ ೧೦-೦೦ ಗಂಟೆಗೆ ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಎಲ್.ಜಿ. ಫೌಂಡೇಷನ್ ಸಂಸ್ಥಾಪಕ ಎಂ.ಲಕ್ಷ್ಮಣ್ಗೌಡ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷ ಅಬ್ಬಣಿ ಶಂಕರ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಕೆ. ಚಂದ್ರಶೇಖರ್, ಎಲ್.ಜಿ. ಫೌಂಡೇಷನ್ನ ಎಲ್.ಎಸ್. ಲತಾ ಲಕ್ಷ್ಮಣ್ಗೌಡ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ರವಿಕುಮಾರ್ ಎಸ್, ಪ್ರಧಾನ ಕಾರ್ಯದರ್ಶಿ ಎ.ಜಿ. ಸುರೇಶ್ ಕುಮಾರ್, ಖಜಾಂಚಿ ರಾಜೇಂದ್ರ ಸಿಂಹ ಬಿ.ಎಲ್, ಜಿಲ್ಲಾ ಕಾರ್ಯದರ್ಶಿ ಶಮ್ಗರ್, ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಹೆಚ್.ಎನ್.ಮುರಳೀದರ್, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಮಾನ್ಯತೆ ಪಡೆದ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ.ಸದಾನಂದ ಮತ್ತು ಎಲ್ಲಾ ನಿರ್ದೇಶಕರು ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್