
ಬೆಂಗಳೂರು, 28 ಜೂನ್ (ಹಿ.ಸ.) :
ಆ್ಯಂಕರ್ : ಆರ್. ಗುಂಡೂರಾವ್ ಫೌಂಡೇಶನ್ ವತಿಯಿಂದ ಗಾಂಧೀನಗರ ವಿಧಾನ ಸಭಾ ಕ್ಷೇತ್ರದ ಬಿನ್ನಿಪೇಟೆ ವಾರ್ಡ್ನಲ್ಲಿ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲಾ ಮಕ್ಕಳಿಗೆ ನೋಟ್ಬುಕ್, ಕಂಪಾಸ್ ಬಾಕ್ಸ್, ಶಾಲಾ ಬ್ಯಾಗ್ ಸೇರಿದಂತೆ ವಿವಿಧ ಶಿಕ್ಷಣ ಸಾಮಗ್ರಿಗಳನ್ನು ಮಾಜಿ ಸಚಿವ ದಿನೇಶ್ ಗುಂಡೂರಾವ್ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆರ್. ಗುಂಡೂರಾವ್ ಫೌಂಡೇಶನ್ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಮಕ್ಕಳ ಶಿಕ್ಷಣಕ್ಕೆ ಬೆಂಬಲ ನೀಡುವುದು ಫೌಂಡೇಶನ್ನ ಪ್ರಮುಖ ಉದ್ದೇಶವಾಗಿದ್ದು, ಶಿಕ್ಷಣ ಸಹಾಯ ಕಾರ್ಯಕ್ರಮವನ್ನು ನಿರಂತರವಾಗಿ ಮುಂದುವರಿಸಲಾಗುತ್ತಿದೆ ಎಂದು ತಿಳಿಸಿದರು.
ಪ್ರತಿಯೊಬ್ಬ ಮಗುವೂ ಉತ್ತಮ ಶಿಕ್ಷಣ ಪಡೆದು ವಿದ್ಯಾವಂತರಾಗಬೇಕು. ಶಿಕ್ಷಣದ ಮೂಲಕ ತಮ್ಮ ಜೀವನವನ್ನು ರೂಪಿಸಿಕೊಳ್ಳುವುದರ ಜೊತೆಗೆ ಪೋಷಕರನ್ನು ಉತ್ತಮವಾಗಿ ನೋಡಿಕೊಳ್ಳುವಂತಾಗಬೇಕು. ಇಂತಹ ವಿದ್ಯಾವಂತ ಮತ್ತು ಜವಾಬ್ದಾರಿಯುತ ನಾಗರಿಕರಿಂದಲೇ ಉತ್ತಮ ಹಾಗೂ ನೆಮ್ಮದಿಯ ಸಮಾಜ ನಿರ್ಮಾಣ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಗಾಂಧೀನಗರ ವಿಧಾನಸಭಾ ಕ್ಷೇತ್ರದ ವಿವಿಧ ವಾರ್ಡ್ಗಳಲ್ಲಿಯೂ ಇದೇ ರೀತಿಯ ಶಿಕ್ಷಣ ಸಹಾಯ ಕಾರ್ಯಕ್ರಮವನ್ನು ಹಂತ ಹಂತವಾಗಿ ಮುಂದುವರಿಸಲಾಗುವುದು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಫೌಂಡೇಶನ್ನ ಪದಾಧಿಕಾರಿಗಳು, ಶಾಲಾ ಮಕ್ಕಳು, ಪೋಷಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.