ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ; ಶಿಕ್ಷಣವೇ ಸಮಾಜದ ಪ್ರಗತಿಯ ಮೂಲ : ಶಾಸಕ ಸುನಿಲ್ ಗೌಡ ಪಾಟೀಲ
ವಿಜಯಪುರ, 28 ಜೂನ್ (ಹಿ.ಸ.) : ಆಂಕರ್ : ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಸಮಾಜದ ಜವಾಬ್ದಾರಿಯಾಗಿದೆ. ಉತ್ತಮ ಶಿಕ್ಷಣದಿಂದ ಮಾತ್ರ ವ್ಯಕ್ತಿ ಹಾಗೂ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಸುನಿಲ್ ಗೌಡ ಪಾಟೀಲ ಹೇಳಿದರು. ವಿಜಯಪುರ ನಗರದಲ್ಲಿ ಶಿರಸಂಗಿ ಲಿಂ
Sabhe


ವಿಜಯಪುರ, 28 ಜೂನ್ (ಹಿ.ಸ.) :

ಆಂಕರ್ : ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಸಮಾಜದ ಜವಾಬ್ದಾರಿಯಾಗಿದೆ. ಉತ್ತಮ ಶಿಕ್ಷಣದಿಂದ ಮಾತ್ರ ವ್ಯಕ್ತಿ ಹಾಗೂ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಸುನಿಲ್ ಗೌಡ ಪಾಟೀಲ ಹೇಳಿದರು.

ವಿಜಯಪುರ ನಗರದಲ್ಲಿ ಶಿರಸಂಗಿ ಲಿಂಗರಾಜ ವಿವಿಧೋದ್ದೇಶ ಸಂಸ್ಥೆ, ಶ್ರೀಮತಿ ಕಮಲಾಬಾಯಿ ಬಸನಗೌಡ ಪಾಟೀಲ ಚಾರಿಟೇಬಲ್ ಟ್ರಸ್ಟ್, ಶಿರಸಂಗಿ ಲಿಂಗರಾಜ ಪತ್ತಿನ ಸಹಕಾರಿ ಸಂಘ ಹಾಗೂ ವಿಜಯಪುರದ ಲಿಂಗಾಯತ ಕುಡವಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ವೇದಿಕೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವಿಜಯಪುರ, ಬಾಗಲಕೋಟೆ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಸನ್ಮಾನಿಸುವ ಮೂಲಕ ಅವರ ಶೈಕ್ಷಣಿಕ ಸಾಧನೆಗೆ ಪ್ರೋತ್ಸಾಹ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸುನಿಲ್ ಗೌಡ ಪಾಟೀಲ, “ವಿದ್ಯಾರ್ಥಿಗಳ ಪರಿಶ್ರಮ, ಶಿಸ್ತು ಮತ್ತು ಗುರಿ ಸಾಧನೆಯ ಮನೋಭಾವವೇ ಭವಿಷ್ಯದ ಯಶಸ್ಸಿಗೆ ದಾರಿ ತೋರಿಸುತ್ತದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮಗಳು ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗುತ್ತವೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕವಲಗಿ-ಇಂಡಿಯ ಸಿದ್ಧರಾಮೇಶ್ವರ ಸಂಸ್ಥಾನಮಠದ ಪೀಠಾಧ್ಯಕ್ಷ ಡಾ. ಅಭಿನವ ಸಿದ್ಧರಾಮೇಶ್ವರ ಸ್ವಾಮೀಜಿ, ಶಾಸಕ ವಿಠ್ಠಲ ಧೋಂಡಿಬಾ ಕಟಕದೊಂಡ, ವಿಧಾನ ಪರಿಷತ್ ಮಾಜಿ ಶಾಸಕ ಹಾಗೂ ಬಿ.ಎಲ್.ಡಿ.ಇ ಸಂಸ್ಥೆ ಉಪಾಧ್ಯಕ್ಷ ಜಿ.ಕೆ. ಪಾಟೀಲ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಮುಖಂಡರಾದ ಅಣ್ಣಾಸಾಹೇಬಗೌಡ ಎಂ. ಪಾಟೀಲ ಉಕ್ಕಲಿ, ಕಲ್ಲನಗೌಡ ಕೆ. ಪಾಟೀಲ ತೊರವಿ, ಆರ್.ಎನ್. ಜನಗೊಂಡ, ಭಾಗಪ್ಪಗೌಡ ಸಿ. ಪಾಟೀಲ (ಆಹೇರಿ), ಮಲ್ಲನಗೌಡ ಎಂ. ಪಾಟೀಲ ಸಾಲೋಟಗಿ, ಆನಂದ ನಿ. ಖೇಡ ಸಾವಳಸಂಗ, ಶೇಖರ ಜಲಪುರೆ ಸಸಾಲಟ್ಟಿ, ಮಮತಾ ಬನ್ನೂರ ಹೊನವಾಡ, ಸುನೀಲ ಬಿರಾದಾರ, ಎಸ್.ಎ. ಬಿರಾದಾರ (ಕನ್ನಾಳ), ಅನೀಲ ಎಂ. ಪಾಟೀಲ, ಪ್ರಕಾಶ ಜುಮನಾಳ ಸೇರಿದಂತೆ ಹಲವರು ಭಾಗವಹಿಸಿದ್ದರು.

ವಿಜಯಪುರ, ಬಾಗಲಕೋಟೆ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ವಿದ್ಯಾರ್ಥಿಗಳು, ಪೋಷಕರು ಮತ್ತು ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಪ್ರತಿಭಾ ಪುರಸ್ಕಾರ ಸಮಾರಂಭವು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ ಹಾಗೂ ಹೆಚ್ಚಿನ ಸಾಧನೆಯ ಸಂಕಲ್ಪ ಮೂಡಿಸಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande