ಬೆಂಗಳೂರು ಹಸಿರು ಅಭಿಯಾನಕ್ಕೆ ಜಾಗತಿಕ ಗಿನ್ನಿಸ್ ದಾಖಲೆ ಮನ್ನಣೆ
ಬೆಂಗಳೂರು, 28 ಜೂನ್ (ಹಿ.ಸ.) : ಆ್ಯಂಕರ್ : ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಜೂನ್ 27ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾದ ಬೃಹತ್ ಹಸಿರು ಅಭಿಯಾನವು ಜಾಗತಿಕ ಮಟ್ಟದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಕೇವಲ 12 ಗಂಟೆಗಳ ಅವಧಿಯಲ್ಲಿ ವಿವಿಧ ಸ್ಥಳಗಳಲ್ಲಿ ಒಂದೇ ತಂಡದಿಂದ ಅತಿಹೆಚ್ಚು ಸಸಿಗಳನ್ನು
ಗಿನ್ನಿಸ್ ದಾಖಲೆ


ಬೆಂಗಳೂರು, 28 ಜೂನ್ (ಹಿ.ಸ.) :

ಆ್ಯಂಕರ್ : ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಜೂನ್ 27ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾದ ಬೃಹತ್ ಹಸಿರು ಅಭಿಯಾನವು ಜಾಗತಿಕ ಮಟ್ಟದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಕೇವಲ 12 ಗಂಟೆಗಳ ಅವಧಿಯಲ್ಲಿ ವಿವಿಧ ಸ್ಥಳಗಳಲ್ಲಿ ಒಂದೇ ತಂಡದಿಂದ ಅತಿಹೆಚ್ಚು ಸಸಿಗಳನ್ನು ನೆಟ್ಟ ಸಾಧನೆಗೆ ಪ್ರತಿಷ್ಠಿತ ಗಿನ್ನಿಸ್ ವರ್ಲ್ಡ್ ರೆಕಾರ್ಡ್ಸ್ ಮಾನ್ಯತೆ ದೊರೆತಿದೆ.

ಈ ಐತಿಹಾಸಿಕ ಸಾಧನೆಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಎನ್.ಎ. ಹ್ಯಾರಿಸ್ ಅವರೊಂದಿಗೆ ಗಿನ್ನಿಸ್ ವರ್ಲ್ಡ್ ರೆಕಾರ್ಡ್ಸ್ ಪ್ರಮಾಣಪತ್ರವನ್ನು ಸ್ವೀಕರಿಸಿದರು.

ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂತಸ ವ್ಯಕ್ತಪಡಿಸಿ, ಇದು ಕೇವಲ ಸರ್ಕಾರದ ಸಾಧನೆಯಲ್ಲ; ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಾಗೂ 50 ಸಾವಿರಕ್ಕೂ ಹೆಚ್ಚು ಪರಿಸರ ಪ್ರೇಮಿಗಳ ಸಂಕಲ್ಪ ಮತ್ತು ಶ್ರಮಕ್ಕೆ ಸಂದ ಗೌರವ ಎಂದು ಹೇಳಿದರು.

ಹಸಿರು ಅಭಿಯಾನ ಯಶಸ್ವಿಗೊಳಿಸಲು ಹಗಲಿರುಳು ಶ್ರಮಿಸಿದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕೈಜೋಡಿಸಿದ ಪ್ರತಿಯೊಬ್ಬ ನಾಗರಿಕರಿಗೆ ಮುಖ್ಯಮಂತ್ರಿ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.

ನಮ್ಮ ಬೆಂಗಳೂರು ಸದಾ ಹಸಿರಾಗಿರಲಿ, ಉಸಿರಾಗಿರಲಿ ಎಂಬ ಆಶಯ ವ್ಯಕ್ತಪಡಿಸಿದ ಅವರು, ನಗರದಲ್ಲಿ ಪರಿಸರ ಸಂರಕ್ಷಣೆ ಮತ್ತು ಹಸಿರು ವಾತಾವರಣ ನಿರ್ಮಾಣದ ಕಾರ್ಯಗಳು ಇದೇ ಉತ್ಸಾಹದಲ್ಲಿ ಮುಂದುವರಿಯಲಿವೆ ಎಂದು ತಿಳಿಸಿದರು.

ಕೆಂಪೇಗೌಡ ಜಯಂತಿಯ ಅಂಗವಾಗಿ ನಡೆದ ಈ ಹಸಿರು ಅಭಿಯಾನವು ಪರಿಸರ ಸಂರಕ್ಷಣೆಯ ಮಹತ್ವವನ್ನು ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಸಾಬೀತುಪಡಿಸಿದ್ದು, ಬೆಂಗಳೂರಿನ ಹಸಿರು ಭವಿಷ್ಯಕ್ಕೆ ಹೊಸ ಮೈಲಿಗಲ್ಲು ನಿರ್ಮಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande