
ತುಮಕೂರು, 28 ಜೂನ್ (ಹಿ.ಸ.) :
ಆ್ಯಂಕರ್ : ತುಮಕೂರು ಜಿಲ್ಲೆಯ ಕೋತಿ ತೋಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಪೋಲಿಯೋ ಲಸಿಕಾ ಅಭಿಯಾನಕ್ಕೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಚಾಲನೆ ನೀಡಿದರು.
ಅಭಿಯಾನದ ಅಂಗವಾಗಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದ ಸಚಿವರು, ಪ್ರತಿಯೊಬ್ಬ ಅರ್ಹ ಮಗುವಿಗೂ ತಪ್ಪದೆ ಪೋಲಿಯೋ ಲಸಿಕೆ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಪೋಲಿಯೋ ನಿರ್ಮೂಲನೆಗೆ ಸರ್ಕಾರ ಕೈಗೊಂಡಿರುವ ಆರೋಗ್ಯ ಕಾರ್ಯಕ್ರಮಗಳಿಗೆ ಜನರು ಸಕ್ರಿಯವಾಗಿ ಸಹಕರಿಸುವುದು ಅತ್ಯಂತ ಅಗತ್ಯ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರು, ತುಮಕೂರು ನಗರ ವಿಧಾನ ಸಭಾ ಕ್ಷೇತ್ರದ ಶಾಸಕರು, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಆರೋಗ್ಯ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ವೈದ್ಯರು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.