
ಕೋಲಾರ, ೨೮ ಜೂನ್ (ಹಿ.ಸ) :
ಆ್ಯಂಕರ್ : ಭಾರತವು ಕಳೆದ ೧೫ ವರ್ಷಗಳಿಂದ ಪೋಲಿಯೊ ಮುಕ್ತ ರಾಷ್ಟ್ರವಾಗಿರುವುದು ದೇಶದ ಮಹತ್ತರ ಸಾಧನೆಯಾಗಿದೆ. ಈ ಸ್ಥಿತಿಯನ್ನು ಮುಂದುವರಿಸಿಕೊ0ಡು ಹೋಗಲು ಮತ್ತು ನೆರೆಯ ದೇಶಗಳಲ್ಲಿ ಪೋಲಿಯೋ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ದೃಷ್ಟಿಯಿಂದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಅತ್ಯಂತ ಗಂಭೀರವಾಗಿ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ತಿಳಿಸಿದರು.
ನಗರದ ಎಸ್ ಎನ್ ಆರ್ ಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪೋಷಕರು ಯಾವುದೇ ನಿರ್ಲಕ್ಷ್ಯ ತೋರದೆ ೦ ದಿಂದ ೫ ವರ್ಷದೊಳಗಿನ ತಮ್ಮ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಹಾಕಿಸುವುದರ ಜೊತೆಗೆ, ಪೋಷಕರು ಜಾಗೃತಿಯ ರಾಯಭಾರಿಗಳಾಗಿ ತಮ್ಮ ನೆರೆಹೊರೆಯವರಿಗೂ ಲಸಿಕೆಯ ಮಹತ್ವ ತಿಳಿಸಬೇಕು ಎಂದು ಕರೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈ ಲಸಿಕಾ ಅಭಿಯಾನ ನಿರ್ಣಾಯಕವಾಗಿದೆ. ಸರ್ಕಾರಗಳು 'ಮಿಷನ್ ಇಂದ್ರಧನುಷ್' ಸೇರಿದಂತೆ ಹಮ್ಮಿಕೊಂಡಿರುವ ಆರೋಗ್ಯ ಯೋಜನೆಗಳನ್ನು ಪೋಷಕರು ಸದುಪಯೋಗಪಡಿಸಿಕೊಳ್ಳಬೇಕು. ಆರೋಗ್ಯ ಸಮಸ್ಯೆ ಕಂಡುಬAದ ತಕ್ಷಣ ಸಾರ್ವಜನಿಕರು ತಜ್ಞ ವೈದ್ಯರನ್ನು ಸಂಪರ್ಕಿಸಬೇಕು, ನಿರ್ಲಕ್ಷ್ಯ ವಹಿಸಿ ಕೊನೆಯ ಕ್ಷಣದಲ್ಲಿ ಆಸ್ಪತ್ರೆಗೆ ಬರುವುದು ಸರಿಯಲ್ಲ ಎಂದು ಹೇಳಿದರು.
ಜಿಲ್ಲಾ ಶಾಸ್ತ್ರಚಿಕಿತ್ಸಕ ಡಾ.ಜಗದೀಶ್ ಮಾಹಿತಿ ನೀಡಿ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಪೋಲಿಯೊ ಪ್ರಕರಣಗಳು ವರದಿಯಾಗಿರುವುದರಿಂದ, ಅಲ್ಲಿಂದ ವೈರಸ್ ಹರಡುವ ಸಾಧ್ಯತೆಯನ್ನು ತಡೆಯಲು ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಬೂತ್ಗಳಲ್ಲಿ ಲಸಿಕೆ ನೀಡಲಾಗುತ್ತದೆ. ಜೂನ್ ೨೯, ೩೦ ಮತ್ತು ಜುಲೈ ೦೧: ಮನೆ ಮನೆ ಭೇಟಿ ನೀಡಿ ಲಸಿಕೆ ಪಡೆಯದ ಮಕ್ಕಳಿಗೆ ಲಸಿಕೆ ಹಾಕಲಾಗುವುದು.
ಕಾರ್ಯಕ್ರಮದಲ್ಲಿ ಕೋಲಾರ ಸಂಸದ ಎಂ. ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಎಂ. ಎಲ್. ಅನಿಲ್ ಕುಮಾರ್ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್ ಉಪಸ್ಥಿತರಿದ್ದರು.
ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ, ಅಪರ ಜಿಲ್ಲಾಧಿಕಾರಿ ಎಸ್. ಎಂ. ಮಂಗಳ, ಯೋಜನಾ ನಿರ್ದೇಶಕ ರವಿಚಂದ್ರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಜಗದೀಶ್ ಸೇರಿದಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್