
ಬಾಗಲಕೋಟೆ, 28 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕ ಗಾಣಿಗ ಸಮಾಜ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಬನಹಟ್ಟಿಯಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕ್ಷೇತ್ರದ ಶಾಸಕರು, ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿ, ಶಿಕ್ಷಣವೇ ಜೀವನದ ಯಶಸ್ಸಿನ ಪ್ರಮುಖ ಅಸ್ತ್ರವಾಗಿದೆ. ವಿದ್ಯಾರ್ಥಿಗಳು ಪರಿಶ್ರಮ, ಶಿಸ್ತು ಮತ್ತು ಆತ್ಮವಿಶ್ವಾಸದಿಂದ ಮುಂದುವರಿದರೆ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದು ಹೇಳಿದರು.
ಉತ್ತಮ ಅಂಕಗಳನ್ನು ಪಡೆದು ಸಮಾಜಕ್ಕೆ ಹೆಮ್ಮೆ ತಂದಿರುವ ವಿದ್ಯಾರ್ಥಿಗಳನ್ನು ಗೌರವಿಸುವ ಇಂತಹ ಕಾರ್ಯಕ್ರಮಗಳು ಅವರಲ್ಲಿ ಮತ್ತಷ್ಟು ಉತ್ಸಾಹ ಹಾಗೂ ಪ್ರೇರಣೆಯನ್ನು ತುಂಬುತ್ತವೆ. ಪಾಲಕರು, ಶಿಕ್ಷಕರು ಹಾಗೂ ಸಮಾಜದ ಸಹಕಾರದಿಂದ ವಿದ್ಯಾರ್ಥಿಗಳ ಭವಿಷ್ಯ ರೂಪುಗೊಳ್ಳುತ್ತದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಆತ್ಮೀಯ ಸನ್ಮಾನವನ್ನು ಸ್ವೀಕರಿಸಿದ ಶಾಸಕರು, ಸಮಾಜದ ಅಭಿವೃದ್ಧಿ ಕಾರ್ಯಗಳಿಗೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಬಾಗಲಕೋಟ ಸಂಸದರಾದ ಪಿ.ಸಿ. ಗದ್ದಿಗೌಡರ, ಪೂಜ್ಯರು, ಗಾಣಿಗ ಸಮಾಜದ ಮುಖಂಡರು, ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ಹಿರಿಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ, ಅವರ ಮುಂದಿನ ಶೈಕ್ಷಣಿಕ ಪಯಣ ಯಶಸ್ವಿಯಾಗಲಿ ಎಂದು ಹಾರೈಸಲಾಯಿತು. ಕಾರ್ಯಕ್ರಮವು ಸಮಾಜದ ಒಗ್ಗಟ್ಟು ಮತ್ತು ವಿದ್ಯಾರ್ಥಿಗಳ ಪ್ರೋತ್ಸಾಹದ ಸಂಕೇತವಾಗಿ ಯಶಸ್ವಿಯಾಗಿ ನಡೆಯಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande