
ಹಾವೇರಿ, 28 ಜೂನ್ (ಹಿ.ಸ.) :
ಆ್ಯಂಕರ್ : ವಿಶ್ವ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದ ಅಂಗವಾಗಿ ಇಂದು ಹಾವೇರಿ ನಗರದಲ್ಲಿ ಯಶಸ್ವಿಯಾಗಿ ಪೋಲಿಯೋ ಲಸಿಕೆ ಅಭಿಯಾನವನ್ನು ನಡೆಸಲಾಯಿತು.
ಜಿಲ್ಲಾ ಪಂಚಾಯತ ಸಿಇಒ ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪ್ರತಿ ಮಗುವಿಗೂ ಎರಡು ಹನಿ ಜೀವದ ರಕ್ಷಣೆ ಎಂಬ ಸಂದೇಶದೊಂದಿಗೆ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಯಿತು.
ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ಮುಕ್ತ ಭಾರತದ ನಿರ್ಮಾಣಕ್ಕೆ ಕೈಜೋಡಿಸೋವಂತೆ ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.