ಬಿಡದಿ ಟೌನ್ಶಿಪ್ ಯೋಜನೆ ; ರೈತರ ನಡುವೆ ಚರ್ಚೆಗೆ ಸಿದ್ಧ : ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು, 28 ಜೂನ್ (ಹಿ.ಸ.) : ಆ್ಯಂಕರ್ : ಬಿಡದಿ ಟೌನ್ಶಿಪ್ ಯೋಜನೆ ಸಂಬಂಧ ರೈತರ ನಡುವೆ ಬಂದು ಬಹಿರಂಗ ಚರ್ಚೆ ನಡೆಸಲು ತಾನು ಈಗಲೂ ಸಿದ್ಧನಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ನಗರದ ಜೆ.ಪಿ. ಭವನದಲ್ಲಿರುವ ಪಕ್ಷದ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ
Hdk


ಬೆಂಗಳೂರು, 28 ಜೂನ್ (ಹಿ.ಸ.) :

ಆ್ಯಂಕರ್ : ಬಿಡದಿ ಟೌನ್ಶಿಪ್ ಯೋಜನೆ ಸಂಬಂಧ ರೈತರ ನಡುವೆ ಬಂದು ಬಹಿರಂಗ ಚರ್ಚೆ ನಡೆಸಲು ತಾನು ಈಗಲೂ ಸಿದ್ಧನಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ನಗರದ ಜೆ.ಪಿ. ಭವನದಲ್ಲಿರುವ ಪಕ್ಷದ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯವಾಗಿ ಮುಖ್ಯಮಂತ್ರಿಗೆ ಪತ್ರ ಬರೆದು ಚರ್ಚೆಗೆ ಆಹ್ವಾನ ನೀಡಿದ್ದರೂ ಯಾವುದೇ ಉತ್ತರ ಬಂದಿಲ್ಲ. ಆದರೂ ರೈತರ ಮಧ್ಯೆಯೇ ಈ ವಿಚಾರದ ಕುರಿತು ಚರ್ಚೆ ನಡೆಸಲು ಸಿದ್ಧನಿದ್ದೇನೆ ಎಂದು ತಿಳಿಸಿದರು.

ಬಿಡದಿ ಪ್ರದೇಶದಲ್ಲಿ ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಅದರ ವಿರುದ್ಧ ರೈತರು ಕಳೆದ 475 ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಈ ವಿವಾದದ ಅಂತಿಮ ತೀರ್ಮಾನ ನ್ಯಾಯಾಲಯದಲ್ಲೇ ಆಗಬೇಕಿದೆ. ಆದರೆ ಸರ್ಕಾರ ಸ್ಥಳೀಯ ರೈತರ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದೆ ಹಾಗೂ ಪ್ರತಿಷ್ಠೆಯ ಪ್ರಶ್ನೆಯನ್ನಾಗಿ ಮಾಡಿಕೊಂಡಿದೆ ಎಂದು ಅವರು ಆರೋಪಿಸಿದರು.

ಫಲವತ್ತಾದ ಕೃಷಿ ಭೂಮಿಯನ್ನು ಅಭಿವೃದ್ಧಿ ಹೆಸರಿನಲ್ಲಿ ಸ್ವಾಧೀನಪಡಿಸಿಕೊಳ್ಳುವುದರಿಂದ ರೈತರ ಬದುಕಿಗೆ ಹೊಡೆತ ಬೀಳುತ್ತದೆ. ಸರ್ಕಾರದ ಬಳಿ ಸಾಕಷ್ಟು ಸರ್ಕಾರಿ ಜಮೀನುಗಳಿರುವಾಗ ಕೃಷಿ ಭೂಮಿಯನ್ನೇ ವಶಪಡಿಸಿಕೊಳ್ಳುವ ಅಗತ್ಯವಿಲ್ಲ. ಸರ್ಕಾರಿ ಭೂಮಿಯಲ್ಲಿಯೇ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಸರ್ಕಾರ ಭೂಸ್ವಾಧೀನದ ಮೂಲಕ ಸಾವಿರಾರು ಕೋಟಿ ರೂಪಾಯಿ ಅಕ್ರಮಕ್ಕೆ ಅವಕಾಶ ಕಲ್ಪಿಸುತ್ತಿದೆ ಎಂದು ಆರೋಪಿಸಿದ ಕುಮಾರಸ್ವಾಮಿ, ರಾಜ್ಯದ ವಿವಿಧ ಭಾಗಗಳಿಂದ ಈ ಹೋರಾಟಕ್ಕೆ ಬೆಂಬಲ ವ್ಯಕ್ತವಾಗುತ್ತಿದೆ ಎಂದರು.

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಿರುವುದರಿಂದ ಈ ಹೋರಾಟ ನಡೆಯುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿದ ಅವರು, ನಮ್ಮ ಹೋರಾಟ ಯಾವುದೇ ವ್ಯಕ್ತಿಯ ವಿರುದ್ಧವಲ್ಲ. ಬಿಡದಿ ಭಾಗದ ರೈತರನ್ನು ಯಾವ ಪರಿಸ್ಥಿತಿಗೆ ತಳ್ಳಲಾಗಿದೆ ಎಂಬುದರ ವಿರುದ್ಧದ ಹೋರಾಟ ಇದು. ರೈತರ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದಲೇ ನಾವು ಹೋರಾಟ ನಡೆಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande