
ನವದೆಹಲಿ, 03 ಜೂನ್ (ಹಿ.ಸ.) :
ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ದರಗಳು ಸ್ಥಿರವಾಗಿದ್ದು, ಬೆಲೆಗಳಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ದೇಶದ ಬಹುತೇಕ ಪ್ರಮುಖ ನಗರಗಳಲ್ಲಿ ಮಂಗಳವಾರದ ದರವೇ ಬುಧವಾರವೂ ಮುಂದುವರಿದಿದೆ.
ದೇಶದ ವಿವಿಧ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹1,56,210 ರಿಂದ ₹1,58,170 ರವರೆಗೆ ದಾಖಲಾಗಿದ್ದರೆ, 22 ಕ್ಯಾರೆಟ್ ಚಿನ್ನದ ದರ ₹1,43,190 ರಿಂದ ₹1,44,990 ನಡುವೆ ವಹಿವಾಟಾಗಿದೆ.
ಇದೇ ವೇಳೆ ಬೆಳ್ಳಿ ಬೆಲೆಯಲ್ಲೂ ಯಾವುದೇ ಬದಲಾವಣೆ ಕಂಡುಬರದೇ, ದೆಹಲಿ ಮಾರುಕಟ್ಟೆಯಲ್ಲಿ ಪ್ರತಿ ಕಿಲೋಗ್ರಾಂ ಬೆಳ್ಳಿ ₹2,79,900 ದರದಲ್ಲಿ ಮಾರಾಟವಾಗಿದೆ.
ರಾಜಧಾನಿ ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ₹1,56,360 ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆ ₹1,43,340 ಪ್ರತಿ 10 ಗ್ರಾಂಗೆ ದಾಖಲಾಗಿದೆ. ಆರ್ಥಿಕ ರಾಜಧಾನಿ ಮುಂಬೈನಲ್ಲಿ 24 ಕ್ಯಾರೆಟ್ ಚಿನ್ನ ₹1,56,210 ಮತ್ತು 22 ಕ್ಯಾರೆಟ್ ಚಿನ್ನ ₹1,43,190 ದರದಲ್ಲಿ ಮಾರಾಟವಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.