ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ
ಕೊಪ್ಪಳ, 30 ಜೂನ್ (ಹಿ.ಸ.) : ಆ್ಯಂಕರ್ : 2026-27ನೇ ಸಾಲಿನ ಮೆಟ್ರಿಕ್ ನಂತರದ (ಪಿ.ಯು.ಸಿ, ಡಿಪ್ಲೋಮಾ, ಐ.ಟಿ.ಐ., ಪದವಿ ಮತ್ತು ಸ್ನಾತಕೋತ್ತರ ಪದವಿ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳಿಗೆ ಶ
ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ


ಕೊಪ್ಪಳ, 30 ಜೂನ್ (ಹಿ.ಸ.) :

ಆ್ಯಂಕರ್ : 2026-27ನೇ ಸಾಲಿನ ಮೆಟ್ರಿಕ್ ನಂತರದ (ಪಿ.ಯು.ಸಿ, ಡಿಪ್ಲೋಮಾ, ಐ.ಟಿ.ಐ., ಪದವಿ ಮತ್ತು ಸ್ನಾತಕೋತ್ತರ ಪದವಿ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು https://ssp.karnataka.gov.in ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಕಳೆದ ಸೆಮಿಸ್ಟರ್/ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆದಿರಬೇಕು. ಮೆಟ್ರಿಕ್ ನಂತರದ ಕೋರ್ಸುಗಳ ಶುಲ್ಕ ಮರುಪಾವತಿ ಯೋಜನೆಗಾಗಿ ಕುಟುಂಬದ ವಾರ್ಷಿಕ ಆದಾಯವು ರೂ.2 ಲಕ್ಷಗಳನ್ನು ಮೀರಿರಬಾರದು. ವೃತ್ತಿಪರ ಹಾಗೂ ತಾಂತ್ರಿಕ ಕೋರ್ಸುಗಳಿಗೆ (ಮೆರಿಟ್-ಕಮ್-ಮೀನ್ಸ್) ಶುಲ್ಕ ಮರುಪಾವತಿ ಯೊಜನೆಗಾಗಿ ಕುಟುಂಬದ ವಾರ್ಷಿಕ ಆದಾಯವು ರೂ.2.5 ಲಕ್ಷ ಮೀರಿರಬಾರದು. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಪೂರ್ವದಲ್ಲಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿ NPCI MAPPING ACTIVE ಆಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಶುಲ್ಕ ಮರುಪಾವತಿಯ ಪ್ರಕ್ರಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳು ಹಾಗೂ ಮಾರ್ಗಸೂಚಿಗಳಿಗೆ ಒಳಪಟ್ಟಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ https://dom.karnataka.gov.in ಅನ್ನು ವೀಕ್ಷಿಸಬಹುದು. ಅಥವಾ ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ ಮೌಲಾನಾ ಅಜಾದ್ ಭವನ ಹೊಸಪೇಟೆ ರಸ್ತೆ ಕೊಪ್ಪಳ: 08539-225070, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕುಷ್ಟಗಿ : 8747861392, ಗಂಗಾವತಿ: 9986244408, ಯಲಬುರ್ಗಾ: 8095191406 ಇವರನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಜ್ಮೀರ್ ಅಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande