
ಹುಬ್ಬಳ್ಳಿ, 30 ಜೂನ್ (ಹಿ.ಸ.) :
ಆ್ಯಂಕರ್ : ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಇಂದು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ವತಿಯಿಂದ ಠಾಣಾ ವ್ಯಾಪ್ತಿಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ದುಷ್ಪರಿಣಾಮಗಳು, ಅಕ್ರಮ ಮಾದಕ ವಸ್ತುಗಳ ಸಾಗಾಣಿಕೆ ತಡೆ ಹಾಗೂ ಸಂಬಂಧಿತ ಕಾನೂನುಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ದುಷ್ಪರಿಣಾಮಗಳ ಬಗ್ಗೆ ವಿವರವಾಗಿ ತಿಳಿಸಿದರು. ಜೊತೆಗೆ ಮಾದಕ ವಸ್ತುಗಳ ಮಾರಾಟ, ಸಾಗಾಣಿಕೆ ಮತ್ತು ಸೇವನೆಗೆ ಸಂಬಂಧಿಸಿದ ಕಾನೂನುಗಳ ಬಗ್ಗೆ ಅರಿವು ಮೂಡಿಸಿ, ಇಂತಹ ಚಟುವಟಿಕೆಗಳ ಬಗ್ಗೆ ಮಾಹಿತಿ ದೊರೆತಲ್ಲಿ ತಕ್ಷಣವೇ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಿದರು.
ವಿದ್ಯಾರ್ಥಿಗಳು ಯಾವುದೇ ರೀತಿಯ ಮಾದಕ ವ್ಯಸನಗಳಿಗೆ ಒಳಗಾಗದೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಹಾಗೂ ಸಮಾಜವನ್ನು ಮಾದಕ ವ್ಯಸನ ಮುಕ್ತವಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಅಧಿಕಾರಿಗಳು ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.