
ಬಳ್ಳಾರಿ, 30 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಶೈಕ್ಷಣಿಕ ವರ್ಷ 2026-27ರ ಜುಲೈ ಆವೃತ್ತಿಯ ಪ್ರವೇಶಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಯುಜಿಸಿ ಅನುಮೋದಿತ ವಿವಿಧ ಪದವಿ, ಸ್ನಾತಕೋತ್ತರ ಪದವಿ (ಎಂ.ಎಸ್.ಡಬ್ಲ್ಯೂ, ಎಂ.ಲಿಬ್.ಐ.ಎಸ್ಸಿ.), ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ ಈಗಾಗಲೇ ಆನ್ಲೈನ್ ಮೂಲಕ ಪ್ರವೇಶಾತಿ ಪ್ರಾರಂಭವಾಗಿದೆ ಎಂದು ಬಳ್ಳಾರಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕ ನಾಗೇಶ್ ಎಂ. ಅವರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ www.ksoumysuru.ac.in ಗೆ ಭೇಟಿ ನೀಡಬಹುದಾಗಿದೆ.
ವಿಶೇಷ ಶುಲ್ಕ ವಿನಾಯಿತಿ ಮತ್ತು ರಿಯಾಯಿತಿಗಳು:
ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ / ಎಕ್ಸ್ ಸರ್ವೀಸ್ಮನ್ ಅಭ್ಯರ್ಥಿಗಳಿಗೆ, ಆಟೋ ಮತ್ತು ಕ್ಯಾಬ್ ಚಾಲಕರು ಹಾಗೂ ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಇರಲಿದೆ.
ಕೋವಿಡ್ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ, ದೃಷ್ಟಿಹೀನ ವಿದ್ಯಾರ್ಥಿಗಳಿಗೆ ಹಾಗೂ ತೃತೀಯ ಲಿಂಗಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು.
ಅರ್ಜಿ ಸಲ್ಲಿಸುವಾಗ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದಲ್ಲಿ ವಿದ್ಯಾರ್ಥಿಗಳು ಆನ್ಲೈನ್ ಸಹಾಯವಾಣಿ ಮೊ.8800335638 / 8690544544 ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊ.9986696487 ಗೆ ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್