
ಕೊಪ್ಪಳ, 30 ಜೂನ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ತಾಲ್ಲೂಕಿನ ಕರ್ಕಿಹಳ್ಳಿ ಗ್ರಾಮದಲ್ಲಿ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲಾ ಸಂಕೀರ್ಣ ನಿರ್ಮಾಣಕ್ಕೆ ಗ್ರಾಮದ ಜಮೀನಿನ ಮಾಲೀಕರಾದ ಕೋಮಲಾ ಗಂ. ಶರಣಪ್ಪ ನಾಲ್ವಡ ಅವರ ಸರ್ವೇ ನಂ 14 ರ ಒಟ್ಟು 4-22 ಎಕರೆ ಜಮೀನನ್ನು ಪ್ರತಿ ಎಕರೆಗೆ ರೂ.14,50,000 ಗಳಂತೆ ಖರೀದಿಸಲಾಗುತ್ತಿದ್ದು, ಈ ಬಗ್ಗೆ ಆಕ್ಷೇಪಣೆ ಆಹ್ವಾನಿಸಿದೆ.
ಖರೀದಿಗೆ ಸಂಬಂಧಿಸಿದಂತೆ ಜಮೀನಿನ ಮಾಲೀಕರ ಕುಟುಂಬಗಳ ವಂಶಸ್ಥರು, ವಾರಸುದಾರರು ಅಥವಾ ಸಾರ್ವಜನಿಕರಿಂದ ಏನಾದರೂ ಆಕ್ಷೇಪಣೆ ಅಥವಾ ತಕಾರರುಗಳಿದ್ದಲ್ಲಿ ಈ ಪ್ರಕಟಣೆ ಪ್ರಕಟಗೊಂಡ 7 ದಿನಗಳೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಕಾರ್ಯಾಲಯಕ್ಕೆ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಬಹುದು ಎಂದು ವಸತಿ ಶಾಲೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್