
ಕುಷ್ಟಗಿ, 30 ಜೂನ್ (ಹಿ.ಸ.) :
ಆ್ಯಂಕರ್ : 2026-27 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಮುಂಗಾರು ಹಂಗಾಮಿನಲ್ಲಿಅನುಷ್ಠಾನಗೊಳಿಸಲಾಗುತ್ತಿದ್ದು, ಬೆಳೆ ವಿಮೆ ನೋಂದಾಯಿಸಲು ಕುಷ್ಟಗಿ ತಾಲ್ಲೂಕಿನ ರೈತರಿಗೆ ಸೂಚಿಸಲಾಗಿದೆ.
ಮುಂಗಾರು ಹಂಗಾಮಿನಲ್ಲಿ ಭತ್ತ (ನೀರಾವರಿ), ಮುಸುಕಿನಜೋಳ (ನೀರಾವರಿ), ಮುಸುಕಿನಜೋಳ (ಮಳೆ ಆಶ್ರಿತ), ಜೋಳ (ನೀರಾವರಿ), ಸಜ್ಜೆ (ನೀರಾವರಿ), ಸಜ್ಜೆ (ಮಳೆ ಆಶ್ರಿತ), ನವಣೆ (ಮಳೆ ಆಶ್ರಿತ), ತೊಗರಿ (ನೀರಾವರಿ), ತೊಗರಿ (ಮಳೆ ಆಶ್ರಿತ), ಹುರುಳಿ (ಮಳೆ ಆಶ್ರಿತ), ಅಲಸಂದಿ (ಮಳೆ ಆಶ್ರಿತ), ಎಳ್ಳು (ಮಳೆ ಆಶ್ರಿತ), ಶೇಂಗಾ (ನೀರಾವರಿ), ಶೇಂಗಾ (ಮಳೆ ಆಶ್ರಿತ), ಸೂರ್ಯಕಾಂತಿ (ನೀರಾವರಿ), ಸೂರ್ಯಕಾಂತಿ (ಮಳೆ ಆಶ್ರಿತ), ಹತ್ತಿ (ಮಳೆ ಆಶ್ರಿತ), ಟೊಮ್ಯಾಟೊ, ಈರುಳ್ಳಿ (ನೀರಾವರಿ), ಈರುಳ್ಳಿ (ಮಳೆ ಆಶ್ರಿತ) ಬೆಳೆಗಳ ವಿಮೆ ನೋಂದಾಯಿಸಲು ಜುಲೈ 31 ಹಾಗೂ ಹೆಸರು (ಮಳೆ ಆಶ್ರಿತ), ಹತ್ತಿ (ನೀರಾವರಿ) ಬೆಳೆಗಳ ವಿಮೆ ನೋಂದಾಯಿಸಲು ಜುಲೈ 15 ಕೊನೆಯ ದಿನವಾಗಿದ್ದು, ರೈತರು ಬೆಳೆವಿಮೆ ನೋಂದಾಯಿಸಿ ಪರಿಹಾರ ಲಾಭ ಪಡೆಯಲು ತಿಳಿಸಿದೆ.
ವಿಮೆ ಸೌಲಭ್ಯ ಪಡೆಯಲು ರೈತರು ಕಡ್ಡಾಯವಾಗಿ ಎಫ್ ಐ ಡಿ ಯನ್ನು ಹೊಂದಿರಬೇಕು. ರೈತರು ಬಿತ್ತನೆ ಮಾಡುವ ಬೆಳೆಯನ್ನು ನೋಂದಾಯಿಸಬೇಕು ಮತ್ತು ಬೆಳೆಯನ್ನು ತಾವೇ ಖುದ್ದಾಗಿ ಬೆಳೆ ಸಮೀಕ್ಷೆಯನ್ನು ಮಾಡಬೇಕು. ರೈತರು ತಮ್ಮ ದಾಖಲಾತಿಗಳಾದ ಪಹಣಿ, ಆಧಾರ್ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಇನ್ನೊಬ್ಬರಿಗೆ ಯಾವುದೇ ಕಾರಣಕ್ಕೂ ನೀಡಬಾರದು. ತಾವೇ ಖುದ್ದಾಗಿ ಬೆಳೆವಿಮೆ ನೋಂದಾಯಿಸಬೇಕು. ಬೆಳೆ ಸಾಲ ಪಡೆಯದ ರೈತರು ಸಮೀಪದ ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರ (ಸಿಎಸ್ಸಿ ), ಗ್ರಾಮ -ಒನ್ ಮೂಲಕ ನೋಂದಾಯಿಸಿಕೊಳ್ಳಬಹುದು.
ಪ್ರಸಕ್ತ ಸಾಲಿಗೆ Iffco Tokio General Insurance Company ಆಯ್ಕೆಯಾಗಿದ್ದು, ರೈತರು ಹೆಚ್ಚಿನ ಮಾಹಿತಿಗಾಗಿ ಇನ್ಸುರೆನ್ಸ್ ಕಂಪನಿಯ ಪ್ರತಿನಿಧಿ ಅಥವಾ ಟೋಲ್ ಫ್ರೀ ನಂ : 18001035490 ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಓನ್ ಅಥವಾ ಸಂಬಂಧ ಪಟ್ಟ ಬ್ಯಾಂಕ್ ಶಾಖೆಯನ್ನು ಸಂಪರ್ಕಿಸುವಂತೆ ಕುಷ್ಟಗಿ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್