ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಶಾಲೆ ಭೇಟಿ
ಬಳ್ಳಾರಿ, 30 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು. ನಿಸಾರ್ ಅಹಮದ್ ಅವರು ಮಂಗಳವಾರ ನಗರದ ಎಪಿಎಂಸಿ ಈದ್ಗಾ ಸಮೀಪದ ಸರ್ಕಾರಿ ಹಿರಿಯ ಉರ್ದು ಪ್ರೌಢಶಾಲೆ ಹಾಗೂ ಕೌಲ್ ಬಜಾರ್ ತರಬೇತಿ ಶಾಲೆಗೆ ಭೇಟಿ ನೀಡಿ ಶಾಲಾ ಕಟ್ಟಡ ಹಾಗೂ ಮೂಲಸೌಕರ್ಯಗಳನ್ನು ಪರಿಶೀಲಿಸಿ
Minorities Commission Chairman U. Nisar Ahmed visits school;


Minorities Commission Chairman U. Nisar Ahmed visits school;


Minorities Commission Chairman U. Nisar Ahmed visits school;


ಬಳ್ಳಾರಿ, 30 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು. ನಿಸಾರ್ ಅಹಮದ್ ಅವರು ಮಂಗಳವಾರ ನಗರದ ಎಪಿಎಂಸಿ ಈದ್ಗಾ ಸಮೀಪದ ಸರ್ಕಾರಿ ಹಿರಿಯ ಉರ್ದು ಪ್ರೌಢಶಾಲೆ ಹಾಗೂ ಕೌಲ್ ಬಜಾರ್ ತರಬೇತಿ ಶಾಲೆಗೆ ಭೇಟಿ ನೀಡಿ ಶಾಲಾ ಕಟ್ಟಡ ಹಾಗೂ ಮೂಲಸೌಕರ್ಯಗಳನ್ನು ಪರಿಶೀಲಿಸಿದ್ದಾರೆ.

ಭೇಟಿ ವೇಳೆ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿಯಿ0ದ ಶಾಲೆಯಲ್ಲಿರುವ ವಿವಿಧ ಸಮಸ್ಯೆಗಳು, ಮೂಲಸೌಕರ್ಯದ ಕೊರತೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದು ಆಲಿಸಿದರು.

ಶಾಲೆಯ ತರಗತಿ ಕೊಠಡಿಗಳು, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳು ಮತ್ತು ಗ್ರಂಥಾಲಯವನ್ನು ಖುದ್ದಾಗಿ ವೀಕ್ಷಿಸಿದ ಅಧ್ಯಕ್ಷರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಶಿಕ್ಷಕರಿಗೆ ಸೂಚಿಸಿದರು.

ಕಟ್ಟಡದ ಸ್ಥಿತಿಗತಿ, ತರಗತಿ ಕೊಠಡಿಗಳು ಹಾಗೂ ಶಾಲಾ ಪರಿಸರವನ್ನು ಪರಿಶೀಲಿಸಿದ ಅವರು, ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ. ಶಾಲೆಯಲ್ಲಿ ಕಂಡುಬAದಿರುವ ಕೊಠಡಿಗಳ ಕೊರತೆ ಮತ್ತು ಸ್ವಚ್ಛತೆಯ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು. ಈ ಕುರಿತು ಸಂಬ0ಧಪಟ್ಟ ಅಧಿಕಾರಿಗಳಿಗೆ ಹಾಗೂ ಶಿಕ್ಷಣ ಇಲಾಖೆಗೆ ಶೀಘ್ರದಲ್ಲೇ ವರದಿ ಸಲ್ಲಿಸಿ, ಅಗತ್ಯ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಸಮುದಾಯದ ರಾಜ್ಯಾಧ್ಯಕ್ಷ ದಾದಾ ಭಾಯ್, ಜಿಲ್ಲಾಧ್ಯಕ್ಷ ಡಿ.ಅಯಾಜ್, ಬುಡಾ ಮಾಜಿ ಅಧ್ಯಕ್ಷ ಮೋಹಿನ್ ಖಾನ್, ಕ್ರಿಶ್ಚಿಯನ್ ಸಮುದಾಯದ ಮುಖ್ಯಸ್ಥ ಜಾಶ್ವಾ, ಮುಖಂಡ ಕಣೇಕಲ್ ಮಾಬುಸಾಬ್, ಆಯೋಗದ ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಮುಜಿಬುಲ್ಲಾ ಜಫಾರಿ, ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಅಧಿಕಾರಿ ರಾಜು ಸೇರಿದಂತೆ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande