ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ಲೈನ್ ಅರ್ಜಿ ಆಹ್ವಾನ
ಬಳ್ಳಾರಿ, 30 ಜೂನ್ (ಹಿ.ಸ.) : ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸಿನ ಬಾಲಕ ಮತ್ತು ಬಾಲಕಿಯರ) ವಿದ್ಯಾರ್ಥಿನಿಲಯಗಳ ಹೊಸ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ
ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ಲೈನ್ ಅರ್ಜಿ ಆಹ್ವಾನ


ಬಳ್ಳಾರಿ, 30 ಜೂನ್ (ಹಿ.ಸ.) :

ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸಿನ ಬಾಲಕ ಮತ್ತು ಬಾಲಕಿಯರ) ವಿದ್ಯಾರ್ಥಿನಿಲಯಗಳ ಹೊಸ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಪೆÇೀಷಕರ ವಾರ್ಷಿಕ ಆದಾಯದ ಮಿತಿ:

ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ ವಿದ್ಯಾರ್ಥಿಗಳಿಗೆ ಗರಿಷ್ಠ ರೂ. 2.50 ಲಕ್ಷ. ಪ್ರವರ್ಗ-2ಎ, 2ಬಿ, 3ಎ, 3ಬಿ ಮತ್ತು ಇತರೆ ಹಿಂದುಳಿದ ವರ್ಗದವರಿಗೆ ಗರಿಷ್ಠ ರೂ. 1 ಲಕ್ಷ.

ಅರ್ಹ ವಿದ್ಯಾರ್ಥಿಗಳು https://ssp.karnataka.gov.in ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಜುಲೈ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವಾಗ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದಲ್ಲಿ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊ.8050770004 ಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande