15 ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ : ಎಂ.ಬಿ. ಪಾಟೀಲ್
ಬಾಗಲಕೋಟೆ, 30 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯ ಸಚಿವ ಸಂಪುಟದ ವಿಸ್ತರಣೆ ಮುಂದಿನ ಹದಿನೈದು ದಿನಗಳೊಳಗೆ ನಡೆಯುವ ಸಾಧ್ಯತೆ ಇದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ನಾವು ತಾತ್ಕಾಲಿಕವಾ
15 ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ : ಎಂ.ಬಿ. ಪಾಟೀಲ್


ಬಾಗಲಕೋಟೆ, 30 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯ ಸಚಿವ ಸಂಪುಟದ ವಿಸ್ತರಣೆ ಮುಂದಿನ ಹದಿನೈದು ದಿನಗಳೊಳಗೆ ನಡೆಯುವ ಸಾಧ್ಯತೆ ಇದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ನಾವು ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಮುಂದಿನ 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಆ ಸಂದರ್ಭದಲ್ಲಿ ನಿಮ್ಮ ಜಿಲ್ಲೆಯವರಿಗೂ ಸಚಿವ ಸ್ಥಾನ ದೊರೆಯಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಬಾಗಲಕೋಟೆ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಇಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಷ್ಟು ದಿನಗಳ ಕಾಲ ನಿಮ್ಮ ಜಿಲ್ಲೆಯವರು ಸಚಿವ ಸಂಪುಟದಲ್ಲಿ ಇರಲಿಲ್ಲವೇ? ಎಂದು ಮರುಪ್ರಶ್ನಿಸಿದರು.

ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಅಂತಿಮ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್ನ ಕೈಯಲ್ಲಿದ್ದು, ಈ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮವಾಗಿರಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ಈ ವಿಷಯದಲ್ಲಿ ನನ್ನ ಕೈಯಲ್ಲಿ ಯಾವುದೇ ಅಧಿಕಾರವಿಲ್ಲ ಎಂದು ಎಂ.ಬಿ. ಪಾಟೀಲ್ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande