
ಧಾರವಾಡ, 30 ಜೂನ್ (ಹಿ.ಸ.) :
ಆ್ಯಂಕರ್ : ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ ಧಾರವಾಡ ತಾಲೂಕಿನ ಮುಗದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಮ್ಮಿಗಟ್ಟಿ ಗ್ರಾಮದಲ್ಲಿ ವಿಶೇಷ ಗ್ರಾಮ ಸಭೆ ನಡೆಯಿತು.
ಗ್ರಾಮ ಸಭೆಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ, ಹೊಸ ಮತದಾರರ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ ಹಾಗೂ ಮತದಾರರ ಪಟ್ಟಿಯನ್ನು ನಿಖರ ಮತ್ತು ಸಮಗ್ರಗೊಳಿಸುವ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಧಾರವಾಡದ ಯೋಜನಾ ಅಧಿಕಾರಿಗಳು, ತಾಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕರು (ನರೇಗಾ), ಗ್ರಾಮ ಪಂಚಾಯಿತಿಯ ಆಡಳಿತಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯಿತಿ ಸಿಬ್ಬಂದಿ, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒಗಳು), ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಯಶಸ್ವಿಯಾಗಿ ನಡೆಯಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರು ತಮ್ಮ ಮತದಾನದ ಹಕ್ಕನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳು ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.