ಮಹಾಲಿಂಗಪುರ ; ತಾಳಿ ಕದ್ದ ಕಳ್ಳ-ಕಳ್ಳಿ ಬಂಧನ
ಬಾಗಲಕೋಟೆ, 04 ಜೂನ್ (ಹಿ.ಸ.) : ಆಂಕರ್ : ಮಹಿಳೆಯರ ಮಾಂಗಲ್ಯ ಸರಗಳನ್ನು ಕಳವು ಮಾಡಿ ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಅವರಿಂದ ಸುಮಾರು ₹9.15 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರಗಳನ್ನು ವಶಪಡಿಸಿಕೊಂಡಿದ್ದಾರೆ.
ಪೊಲೀಸರು


ಬಾಗಲಕೋಟೆ, 04 ಜೂನ್ (ಹಿ.ಸ.) :

ಆಂಕರ್ : ಮಹಿಳೆಯರ ಮಾಂಗಲ್ಯ ಸರಗಳನ್ನು ಕಳವು ಮಾಡಿ ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಅವರಿಂದ ಸುಮಾರು ₹9.15 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣವನ್ನು ಶೀಘ್ರವಾಗಿ ಬೇಧಿಸಿದ ಪೊಲೀಸ್ ತಂಡದ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆಯ ಗೋರಕನಾಥ ಜಾಧವ ಹಾಗೂ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಸವ್ವ ಭದ್ರಶೆಟ್ಟಿ ಎಂದು ಗುರುತಿಸಲಾಗಿದೆ.

ಆರೋಪಿಗಳು ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಾಂಗಲ್ಯ ಸರಗಳನ್ನು ಕಳವು ಮಾಡುತ್ತಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಅವರನ್ನು ಬಂಧಿಸಿದ್ದಾರೆ.

ತನಿಖೆ ವೇಳೆ ಆರೋಪಿಗಳಿಂದ ಕಳವು ಮಾಡಿದ್ದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಗೋರಕನಾಥ ಜಾಧವ ಬಳಿಯಿಂದ ಸುಮಾರು 30 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಹಾಗೂ ಬಸವ್ವ ಭದ್ರಶೆಟ್ಟಿ ಬಳಿಯಿಂದ ಸುಮಾರು 32 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಒಟ್ಟು ಚಿನ್ನಾಭರಣಗಳ ಮೌಲ್ಯ ಸುಮಾರು ₹9.15 ಲಕ್ಷ ಎಂದು ಅಂದಾಜಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿದ್ದ ಮಹಾಲಿಂಗಪುರ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಗಳ ಚಲನವಲನಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ತಾಂತ್ರಿಕ ಮಾಹಿತಿ ಹಾಗೂ ಗುಪ್ತಚರ ಮೂಲಗಳಿಂದ ದೊರೆತ ಸುಳಿವಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದರು.

ಈ ಪ್ರಕರಣವನ್ನು ಬೇಧಿಸುವಲ್ಲಿ ಪಿಎಸ್ಐ ಶಾಂತಾ ಹಳ್ಳಿ, ಕಿರಣ ಸತ್ತಿಗೇರಿ ಹಾಗೂ ಸಿಬ್ಬಂದಿಗಳಾದ ವಿ.ಬಿ. ತೇಲಿ, ಬಿ.ಜಿ. ದೇಸಾಯಿ, ಎ.ಎಂ. ಜಮಖಂಡಿ ಮತ್ತು ಕೃಷ್ಣಾ ಲಮಾಣಿ ಅವರನ್ನೊಳಗೊಂಡ ತಂಡ ಮಹತ್ವದ ಪಾತ್ರ ವಹಿಸಿದೆ. ಅವರ ಪರಿಶ್ರಮ ಮತ್ತು ಕಾರ್ಯದಕ್ಷತೆಯನ್ನು ಶ್ಲಾಘಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ಅವರು ಪೊಲೀಸ್ ತಂಡಕ್ಕೆ ಬಹುಮಾನ ಘೋಷಿಸಿದ್ದಾರೆ.

ಪ್ರಕರಣದ ಯಶಸ್ವಿ ಬೇಧನೆಯಿಂದ ಕಳುವಾದ ಆಭರಣಗಳನ್ನು ಮರಳಿ ಪಡೆಯಲು ಸಾಧ್ಯವಾಗಿದ್ದು, ಇಂತಹ ಅಪರಾಧ ಚಟುವಟಿಕೆಗಳ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಮುಂದುವರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande