




ತುಮಕೂರು, 06 ಜೂನ್ (ಹಿ.ಸ.) :
ಆ್ಯಂಕರ್ : ತುಮಕೂರಿನಲ್ಲಿ ಶನಿವಾರ ಆರಂಭವಾದ ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ
ಬಳ್ಳಾರಿಯ ಹ್ಯಾಲೀಸ್ ಬ್ಲ್ಯೂನ ವ್ಯವಸ್ಥಾಪಕ ನಿರ್ದೇಶಕರಾಗಿರುವ ಕೆ.ಎಂ. ಶಿವಮೂರ್ತಿ ಅವರಿಗೆ `ಉತ್ತಮ ಕೈಗಾರಿಕೋದ್ಯಮಿ' ಪ್ರಶಸ್ತಿಯನ್ನು ನೀಡಿ ಗೌರವಿಸಿ - ಅಭಿನಂದಿಸಲಾಯಿತು.
ಎಫ್ಕೆಸಿಸಿಐ ಆಶ್ರಯದಲ್ಲಿ ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಬೆಳ್ಳಿ ಹಬ್ಬದ ಸಂಭ್ರಮವು ಜೂನ್ 6 ಮತ್ತು 7 ರಂದು ಆಯೋಜನೆಗೊಂಡಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದ ಎಲ್ಲಾ ಜಿಲ್ಲೆಗಳ ಜಿಲ್ಲಾ ಚೇಂಬರ್ಗಳ ರಾಜ್ಯ ಮಟ್ಟದ ಸಮ್ಮೇಳನದಲ್ಲಿವೂ ನಡೆಯಲಿದ್ದು, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್ ಹಾಗೂ ಗೌರವ ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು ಅವರು, ಎಫ್ಕೆಸಿಸಿಐನ ಅಧ್ಯಕ್ಷರಾಗಿರುವ ಶ್ರೀಮತಿ ಉಮಾರೆಡ್ಡಿ ಅವರಿಗೆ ಬಳ್ಳಾರಿ ಜಿಲ್ಲೆಯ ವಿವಿಧ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿ, ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿ ಮತ್ತು ಮೂಲಭೂತ ಸೌಕರ್ಯಗಳ ಸುಧಾರಣೆಗೆ ಸರ್ಕಾರದ ಮೇಲೆ ಒತ್ತಡ ಹೇರಲು ಮನವಿ ಮಾಡಿದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ ಎಸ್. ದೊಡ್ಡನಗೌಡ, ಜಂಟಿ ಕಾರ್ಯದರ್ಶಿಗಳಾದ ವಿ. ರಾಮಚಂದ್ರ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾದ ಪಿ. ಗಿರೀಶ್, ಆರ್. ನಾಗರಾಜ್ ಮತ್ತು ಜಿ. ಹನುಮೇಶಬಾಬು
ರಾಜ್ಯದ ವಿವಿಧ ಜಿಲ್ಲೆಗಳ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಎರೆಡು ದಿನಗಳ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.
ಈ ಸಮ್ಮೇಳನವು ಕೈಗಾರಿಕೆ, ವಾಣಿಜ್ಯ, ಹೂಡಿಕೆ, ಉದ್ಯಮಾಭಿವೃದ್ಧಿ ಹಾಗೂ ಉದ್ಯಮಿಗಳ ಸವಾಲುಗಳ ಕುರಿತು ಚರ್ಚೆ ನಡೆಸಿ, ಕೈಗೊಳ್ಳುವ ನಿರ್ಧಾರಗಳನ್ನು ಸರ್ಕಾರಕ್ಕೆ ಸಲ್ಲಿಸಲಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್