ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು, 07 ಜೂನ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಕನಕಪುರಕ್ಕೆ ತೆರಳುವ ವೇಳೆ ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸಿ, ಪ್ರಯಾಣಿಕರೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮಹತ್ವವನ್ನು ಅವರು ಮತ
Cm


Cm metro travel


ಬೆಂಗಳೂರು, 07 ಜೂನ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಕನಕಪುರಕ್ಕೆ ತೆರಳುವ ವೇಳೆ ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸಿ, ಪ್ರಯಾಣಿಕರೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮಹತ್ವವನ್ನು ಅವರು ಮತ್ತೊಮ್ಮೆ ಒತ್ತಿ ಹೇಳಿದರು.

ತಮ್ಮ ಅನುಭವವನ್ನು ಎಕ್ಸನಲ್ಲಿ ಹಂಚಿಕೊಂಡಿರುವ ಅವರು, ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ ನಾಗರಿಕರ ಮುಖದಲ್ಲಿನ ನೆಮ್ಮದಿಯನ್ನು ಕಂಡಾಗ ಸುರಕ್ಷಿತ, ಜನಸ್ನೇಹಿ ಹಾಗೂ ಕೈಗೆಟುಕುವ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಜನರ ಬದುಕಿನಲ್ಲಿ ಎಷ್ಟು ಪ್ರಮುಖ ಪಾತ್ರ ವಹಿಸುತ್ತದೆ ಎಂಬುದು ಸ್ಪಷ್ಟವಾಗಿ ಅರಿವಾಯಿತು ಎಂದು ತಿಳಿಸಿದ್ದಾರೆ.

ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಪ್ರತಿಯೊಬ್ಬ ನಾಗರಿಕನ ದೈನಂದಿನ ಜೀವನವನ್ನು ಸುಗಮಗೊಳಿಸಿ, ನಗರದ ವಿವಿಧ ಭಾಗಗಳನ್ನು ಪರಸ್ಪರ ಸಂಪರ್ಕಿಸುವ ದೂರದೃಷ್ಟಿಯ ಯೋಜನೆಗಳಲ್ಲೇ ಬೆಂಗಳೂರಿನ ಭವಿಷ್ಯ ಅಡಗಿದೆ. ಈ ನಿಟ್ಟಿನಲ್ಲಿ ನಮ್ಮ ಮೆಟ್ರೋ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಯಾಣದ ವೇಳೆ ತಮ್ಮೊಂದಿಗೆ ಮಾತನಾಡಿ ಶುಭ ಹಾರೈಸಿದ ಪ್ರತಿಯೊಬ್ಬ ನಾಗರಿಕರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ ಅವರು, ಸಾರ್ವಜನಿಕ ಸೇವೆ ಎಂದರೆ ಕೇವಲ ಅಧಿಕಾರ ಚಲಾಯಿಸುವುದಲ್ಲ. ಅದು ಜನರ ಆಶೋತ್ತರಗಳನ್ನು ಆಲಿಸುವುದು, ನಿರಂತರವಾಗಿ ಕಲಿಯುವುದು ಹಾಗೂ ಜನರೊಂದಿಗೆ ಸದಾ ಸಂಪರ್ಕದಲ್ಲಿರುವುದು ಎಂಬುದನ್ನು ಇಂದಿನ ಅನುಭವ ಮತ್ತೊಮ್ಮೆ ನೆನಪಿಸಿಕೊಟ್ಟಿದೆ ಎಂದು ಹೇಳಿದ್ದಾರೆ.

ರಾಜ್ಯದ ಅಭಿವೃದ್ಧಿ ಮತ್ತು ಜನರ ಕಲ್ಯಾಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಎಲ್ಲರೂ ಕೈಜೋಡಿಸಿ ಇನ್ನಷ್ಟು ಸಮೃದ್ಧ, ಬಲಿಷ್ಠ ಹಾಗೂ ಜನಸ್ನೇಹಿ ಕರ್ನಾಟಕವನ್ನು ನಿರ್ಮಿಸೋಣ ಎಂದು ಅವರು ಕರೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande