ರಾಜೌರಿ ಶೋಧ ಕಾರ್ಯಾಚರಣೆ ವೇಳೆ ಸೇನಾಧಿಕಾರಿ ನಿಧನ
ರಾಜೌರಿ, 07 ಜೂನ್ (ಹಿ.ಸ.) : ಆ್ಯಂಕರ್ : ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ಮಂಜಾಕೋಟ್ ತಹಸಿಲ್ ವ್ಯಾಪ್ತಿಯ ಡೋರಿ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಶೋಧ ಕಾರ್ಯಾಚರಣೆ ವೇಳೆ ಭಾರತೀಯ ಸೇನೆಯ ಅಧಿಕಾರಿಯೊಬ್ಬರು ನಿಧನರಾಗಿದ್ದಾರೆ. ಮೃತರನ್ನು ಅಸ್ಸಾಂ ರೆಜಿಮೆಂಟ್ಗೆ ಸೇರಿದ ಕ್ಯಾಪ್ಟನ್ ಬೀರೇಶ್ವರ್ ಗ
ರಾಜೌರಿ ಶೋಧ ಕಾರ್ಯಾಚರಣೆ ವೇಳೆ ಸೇನಾಧಿಕಾರಿ ನಿಧನ


ರಾಜೌರಿ, 07 ಜೂನ್ (ಹಿ.ಸ.) :

ಆ್ಯಂಕರ್ : ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ಮಂಜಾಕೋಟ್ ತಹಸಿಲ್ ವ್ಯಾಪ್ತಿಯ ಡೋರಿ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಶೋಧ ಕಾರ್ಯಾಚರಣೆ ವೇಳೆ ಭಾರತೀಯ ಸೇನೆಯ ಅಧಿಕಾರಿಯೊಬ್ಬರು ನಿಧನರಾಗಿದ್ದಾರೆ. ಮೃತರನ್ನು ಅಸ್ಸಾಂ ರೆಜಿಮೆಂಟ್ಗೆ ಸೇರಿದ ಕ್ಯಾಪ್ಟನ್ ಬೀರೇಶ್ವರ್ ಗೋಸ್ವಾಮಿ ಎಂದು ಗುರುತಿಸಲಾಗಿದೆ.

ಕಳೆದ ಹಲವು ದಿನಗಳಿಂದ ಡೋರಿ ಅರಣ್ಯ ಪ್ರದೇಶದಲ್ಲಿ ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸ್ ಹಾಗೂ ಇತರ ಭದ್ರತಾ ಪಡೆಗಳು ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಭಯೋತ್ಪಾದಕರ ಚಟುವಟಿಕೆಗಳ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿತ್ತು.

ಕಾರ್ಯಾಚರಣೆಯ ವೇಳೆ ಕ್ಯಾಪ್ಟನ್ ಬೀರೇಶ್ವರ್ ಗೋಸ್ವಾಮಿ ಅವರ ಆರೋಗ್ಯ ಏಕಾಏಕಿ ಹದಗೆಟ್ಟಿದೆ. ಸ್ಥಳದಲ್ಲಿದ್ದ ಯೋಧರು ತಕ್ಷಣ ವೈದ್ಯಕೀಯ ನೆರವು ನೀಡಿ ಅವರನ್ನು ಚಿಕಿತ್ಸೆಗಾಗಿ ಸ್ಥಳಾಂತರಿಸಿದರೂ, ಅವರ ಸ್ಥಿತಿ ಗಂಭೀರವಾಗಿಯೇ ಉಳಿದಿತ್ತು. ಬಳಿಕ ರಾಜೌರಿಯ ಸೇನಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಸೇನೆ ಮೂಲಗಳ ಪ್ರಕಾರ, ಅಗತ್ಯ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ಬಳಿಕ ಅವರ ಪಾರ್ಥಿವ ಶರೀರವನ್ನು ಪೂರ್ಣ ಸೇನಾ ಗೌರವಗಳೊಂದಿಗೆ ಸ್ವಗ್ರಾಮಕ್ಕೆ ಕಳುಹಿಸಲಾಗುವುದು.

ಕ್ಯಾಪ್ಟನ್ ಬೀರೇಶ್ವರ್ ಗೋಸ್ವಾಮಿ ಅವರು ಕರ್ತವ್ಯನಿಷ್ಠ ಹಾಗೂ ಸಮರ್ಪಿತ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಅವರ ನಿಧನವು ಸೇನಾ ವಲಯದಲ್ಲಿ ಹಾಗೂ ಸ್ಥಳೀಯ ಜನರಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ.

ಇದೇ ವೇಳೆ, ದಟ್ಟ ಅರಣ್ಯ, ದುರ್ಗಮ ಪ್ರದೇಶ ಹಾಗೂ ಪ್ರತಿಕೂಲ ಹವಾಮಾನದ ನಡುವೆಯೂ ಡೋರಿ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಭದ್ರತಾ ಪಡೆಗಳು ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಿದ್ದು, ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಮಾಹಿತಿಯನ್ನಷ್ಟೇ ನಂಬುವಂತೆ ಆಡಳಿತ ಸಾರ್ವಜನಿಕರಿಗೆ ಮನವಿ ಮಾಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande