
ಬಳ್ಳಾರಿ, 11 ಜುಲೈ (ಹಿ.ಸ.):
ಆ್ಯಂಕರ್:
ರಾಜ್ಯದಾದ್ಯಂತ ಇರುವ ಎಲ್ಲಾ ಉಪ ನೋಂದಣಿ ಕಚೇರಿಗಳು 2026 ನೇ ಜುಲೈ 12 ರ ಭಾನುವಾರದಂದು ಸಾರ್ವಜನಿಕ ರಜಾ ದಿನವಾಗಿದ್ದರೂ ಸಹ, ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಇಲಾಖೆಯ ಕಾರ್ಯದೊತ್ತಡ ನಿವಾರಣೆಗಾಗಿ ಎಂದಿನಂತೆ ತೆರೆದಿದ್ದು, ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ.
ಈ ದಿನದಂದು ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ ಖರೀದಿ ಹಾಗೂ ಇಲಾಖೆಗೆ ಸಂಬಂಧಿಸಿದ ಇತರ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ.
ಸಾರ್ವಜನಿಕರು ಈ ವಿಶೇಷ ಅವಕಾಶದ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆಯು ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್