ಮೈಸೂರಿನಲ್ಲಿ ಅಕ್ಕಪಡೆ ವತಿಯಿಂದ ಜಾಗೃತಿ ಕಾರ್ಯಕ್ರಮ
ಮೈಸೂರು, 11 ಜುಲೈ (ಹಿ.ಸ.): ಆ್ಯಂಕರ್: ಮೈಸೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಕ್ಕ ಪಡೆ ವತಿಯಿಂದ ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಮಕ್ಕಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಯಿತು. ಈ ವೇಳೆ ಮಹಿಳೆಯರ ಸುರಕ್ಷತೆ, ಮಕ್ಕಳ ಹಕ್ಕುಗಳು ಹಾಗೂ ತುರ್ತು ಸಂದರ್ಭಗಳಲ್ಲಿ ಪಡೆಯಬ
ಜಾಗೃತಿ ಕಾರ್ಯಕ್ರಮ


ಮೈಸೂರು, 11 ಜುಲೈ (ಹಿ.ಸ.):

ಆ್ಯಂಕರ್:

ಮೈಸೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಕ್ಕ ಪಡೆ ವತಿಯಿಂದ ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಮಕ್ಕಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಯಿತು.

ಈ ವೇಳೆ ಮಹಿಳೆಯರ ಸುರಕ್ಷತೆ, ಮಕ್ಕಳ ಹಕ್ಕುಗಳು ಹಾಗೂ ತುರ್ತು ಸಂದರ್ಭಗಳಲ್ಲಿ ಪಡೆಯಬಹುದಾದ ನೆರವಿನ ಕುರಿತು ಅರಿವು ಮೂಡಿಸಲಾಯಿತು. ಜೊತೆಗೆ ಮಹಿಳಾ ಸಹಾಯವಾಣಿ 181, ಮಕ್ಕಳ ಸಹಾಯವಾಣಿ 1098 ಹಾಗೂ ತುರ್ತು ಸಹಾಯವಾಣಿ 112 ಸೇವೆಗಳ ಬಗ್ಗೆ ಮಾಹಿತಿ ನೀಡಿ, ಅಗತ್ಯ ಸಂದರ್ಭದಲ್ಲಿ ನಿರ್ಭಯವಾಗಿ ಬಳಸಿಕೊಳ್ಳುವಂತೆ ಸಲಹೆ ನೀಡಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande