ಹಾನಗಲ್: ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಮುಖಂಡರು
ಹಾವೇರಿ, 11 ಜುಲೈ (ಹಿ.ಸ.): ಆ್ಯಂಕರ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರು ಗ್ರಾಮದಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಹೊನ್ನಪ್ಪ ಕಡೇರ ಹಾಗೂ ಕೆಂಚಪ್ಪ ನಾಗಪ್ಪನವರ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಜನಪರ ಅಭಿವೃದ್ಧಿ, ಸ
Joining


ಹಾವೇರಿ, 11 ಜುಲೈ (ಹಿ.ಸ.):

ಆ್ಯಂಕರ್:

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರು ಗ್ರಾಮದಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಹೊನ್ನಪ್ಪ ಕಡೇರ ಹಾಗೂ ಕೆಂಚಪ್ಪ ನಾಗಪ್ಪನವರ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಜನಪರ ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ಕ್ಷೇತ್ರದ ಸಮಗ್ರ ಪ್ರಗತಿಯ ಆಶಯದಿಂದ ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತಗಳನ್ನು ಮೆಚ್ಚಿ ಇಬ್ಬರು ಹಿರಿಯ ಮುಖಂಡರು ಪಕ್ಷ ಸೇರ್ಪಡೆಯಾಗಿರುವುದು ಸಂತಸದ ವಿಷಯ ಎಂದು ಹೇಳಿದರು.

ಇವರ ಸೇರ್ಪಡೆಯಿಂದ ಆಡೂರು ಗ್ರಾಮದಲ್ಲಿ ಕಾಂಗ್ರೆಸ್ ಸಂಘಟನೆ ಮತ್ತಷ್ಟು ಸದೃಢವಾಗಲಿದ್ದು, ಪಕ್ಷಕ್ಕೆ ಹೊಸ ಶಕ್ತಿ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಅಭಿವೃದ್ಧಿಯ ಪಯಣದಲ್ಲಿ ಎಲ್ಲರೂ ಕಾಂಗ್ರೆಸ್ ಪಕ್ಷದೊಂದಿಗೆ ಕೈಜೋಡಿಸುವಂತೆ ಕರೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande