
ಬೆಂಗಳೂರು, 11 ಜುಲೈ (ಹಿ.ಸ.):
ಆ್ಯಂಕರ್:
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ 'ನಮ್ಮ ಅಭಿಮಾನದ ಅಭಿನಂದನಾ ಸಮಾರಂಭ'ದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ಹಾಗೂ ಜನಸೇವೆಯಲ್ಲಿ ಸರ್ಕಾರಿ ನೌಕರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಅವರ ನಿಷ್ಠೆ, ಪ್ರಾಮಾಣಿಕತೆ ಮತ್ತು ಸೇವಾ ಮನೋಭಾವ ಶ್ಲಾಘನೀಯವಾಗಿದ್ದು, ಉತ್ತಮ ಆಡಳಿತಕ್ಕಾಗಿ ಸರ್ಕಾರ ಸದಾ ಸರ್ಕಾರಿ ನೌಕರರೊಂದಿಗೆ ಕೈಜೋಡಿಸಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ ಪರಮಪೂಜ್ಯ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಸೇರಿದಂತೆ ಎಲ್. ಭೈರಪ್ಪ, ರಮೇಶ್ ಸಂಗಾ, ಅಮೃತ್ ರಾಜ್, ಬಸವರಾಜು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.