
ಬೆಂಗಳೂರು, 11 ಜುಲೈ (ಹಿ.ಸ.):
ಆ್ಯಂಕರ್:
ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಅಲ್ಲಲ್ಲಿ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ಸೂಚನೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಗುಡುಗು-ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.