
ಹುಬ್ಬಳ್ಳಿ, 11 ಜುಲೈ (ಹಿ.ಸ.):
ಆ್ಯಂಕರ್:ಉತ್ತರ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಸಭೆ ಜುಲೈ 12ರಂದು ಸಂಜೆ 4.30ಕ್ಕೆ ಹುಬ್ಬಳ್ಳಿಯ ಪ್ರವಾಸಿ ಮಂದಿರದ ಹಳೆಯ ಕಟ್ಟಡದಲ್ಲಿ ನಡೆಯಲಿದೆ.
ಸಭೆಯಲ್ಲಿ ಇತ್ತೀಚೆಗೆ ನಡೆದ ಧರಣಿಯ ಯಶಸ್ಸಿನ ಕುರಿತು ಚರ್ಚೆ ನಡೆಸುವುದರ ಜೊತೆಗೆ ಮುಂದಿನ ಹೋರಾಟದ ರೂಪುರೇಷೆ ಹಾಗೂ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಮಿತಿಯ ರಾಜ್ಯಾಧ್ಯಕ್ಷ ಕುಮಾರ ಹಕಾರಿ ತಿಳಿಸಿದ್ದಾರೆ.
ಸಮಿತಿಯ ಎಲ್ಲ ಪದಾಧಿಕಾರಿಗಳು, ಸದಸ್ಯರು ಹಾಗೂ ಹೋರಾಟಗಾರರು ಸಭೆಯಲ್ಲಿ ಭಾಗವಹಿಸಿ ತಮ್ಮ ಸಲಹೆ-ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.