
ಬೆಂಗಳೂರು, 11 ಜುಲೈ (ಹಿ.ಸ.):
ಆ್ಯಂಕರ್:
ವಿಶ್ವ ಜನಸಂಖ್ಯಾ ದಿನದ ಅಂಗವಾಗಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ರಾಜ್ಯದ ಜನತೆಗೆ ಶುಭಾಶಯ ಕೋರಿದ್ದು, ಪ್ರತಿಯೊಬ್ಬ ನಾಗರಿಕರ ಅಗತ್ಯಗಳು ಮತ್ತು ಆಶೋತ್ತರಗಳಿಗೆ ಅನುಗುಣವಾಗಿ ಅಭಿವೃದ್ಧಿ ಸಾಗಬೇಕೆಂದು ಕರೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿದ ಸಂದೇಶದಲ್ಲಿ, ವಿಶ್ವ ಜನಸಂಖ್ಯಾ ದಿನವು ಅಭಿವೃದ್ಧಿಯು ಪ್ರತಿಯೊಬ್ಬ ನಾಗರಿಕರ ಅಗತ್ಯಗಳು ಹಾಗೂ ಆಕಾಂಕ್ಷೆಗಳಿಗೆ ಅನುಗುಣವಾಗಿ ಮುನ್ನಡೆಯಬೇಕೆಂಬುದನ್ನು ನೆನಪಿಸುವ ದಿನವಾಗಿದೆ ಎಂದು ಹೇಳಿದ್ದಾರೆ.
ಉತ್ತಮ ಆರೋಗ್ಯ ಸೇವೆ, ಗುಣಮಟ್ಟದ ಶಿಕ್ಷಣ, ಲಿಂಗ ಸಮಾನತೆ, ಮಾಹಿತಿಯಾಧಾರಿತ ನಿರ್ಧಾರಗಳಿಗೆ ಅವಕಾಶ ಹಾಗೂ ಸುಸ್ಥಿರ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಪ್ರತಿಯೊಬ್ಬರೂ ಘನತೆ, ಭದ್ರತೆ ಮತ್ತು ಭರವಸೆಯೊಂದಿಗೆ ಬದುಕುವ ಕರ್ನಾಟಕವನ್ನು ನಿರ್ಮಿಸಬಹುದು ಎಂದು ಡಾ. ಜಿ. ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.