ಚುಂಚದೇನಹಳ್ಳಿಯಲ್ಲಿ ವೇಣುಗೋಪಾಲಸ್ವಾಮಿ ದೇವಸ್ಥಾನ ಉದ್ಘಾಟನೆ
ಚುಂಚದೇನಹಳ್ಳಿಯಲ್ಲಿ ವೇಣುಗೋಪಾಲಸ್ವಾಮಿ ದೇವಸ್ಥಾನ ಉದ್ಘಾಟನೆ
ಕೋಲಾರ ತಾಲ್ಲೂಕು ಚುಂಚದೇನಹಳ್ಳಿ ವೇಣುಗೋಪಾಲಸ್ವಾಮಿ ದೇವಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಪೂಜೆ ಸಲ್ಲಿಸಿದರು.


ಕೋಲಾರ, ೧೨ ಜುಲೈ (ಹಿ.ಸ):

ಆ್ಯಂಕರ್ : ತಾಲೂಕಿನ ವಕ್ಕಲೇರಿ ಹೋಬಳಿಯ ಚುಂಚದೇನಹಳ್ಳಿ ಗ್ರಾಮದಲ್ಲಿರುವ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ನೂತನ ವಿಮಾನ ಗೋಪುರ ಉದ್ಘಾಟನೆ ಹಾಗೂ ದೇವಾಲಯದ ಪ್ರತಿಷ್ಠಾಪನೆಯಲ್ಲಿ ಭಾನುವಾರ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಭಾತವಹಿಸಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಜಿಲ್ಲೆಯಲ್ಲಿ ಸುಖ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ದೇವಾಲಯಗಳು ನಮ್ಮ ಸಂಸ್ಕೃತಿ, ಸಂಪ್ರದಾಯ ಮತ್ತು ಧಾರ್ಮಿಕ ನಂಬಿಕೆಗಳ ಪ್ರತೀಕವಾಗಿದ್ದು, ಇಂತಹ ಧಾರ್ಮಿಕ ಕಾರ್ಯಗಳು ಸಮಾಜದಲ್ಲಿ ಐಕ್ಯತೆ ಮತ್ತು ಆಧ್ಯಾತ್ಮಿಕತೆಯನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಅನಿಲ್ ಕುಮಾರ್ ಹೇಳಿದರು.

ಕಾರ್ಯಕ್ರಮದಲ್ಲಿ ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ಸಹಕಾರಿ ಯೂನಿಯನ್ ನಿರ್ದೇಶಕ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಗ್ರಾಮದ ಮುಖಂಡರಾದ ಮುನಿರಾಜು, ಮೋಹನ್, ರಾಮಕೃಷ್ಣ, ನಾಗರಾಜಪ್ಪ, ಶಿವಕುಮಾರ್ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande