ಜಮಖಂಡಿ ತಾಲ್ಲೂಕಿನ ಹುಲ್ಯಾಳ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ; ತನಿಖೆಗೆ ಮುಂದಾದ ಪೊಲೀಸರು
ಬಾಗಲಕೋಟೆ, 12 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಹುಲ್ಯಾಳ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇ
ಸಾವು


ಬಾಗಲಕೋಟೆ, 12 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಹುಲ್ಯಾಳ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ.

ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರಣ್ಯ ಪ್ರದೇಶದಲ್ಲಿ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪರಿಶೀಲಿಸಿದಾಗ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಕ್ಷಣವೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಶವದ ಮಹಜರು ನಡೆಸಿ, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಶವ ಹಲವು ದಿನಗಳ ಹಿಂದೆಯೇ ಅರಣ್ಯ ಪ್ರದೇಶದಲ್ಲಿ ಬಿದ್ದಿರುವ ಸಾಧ್ಯತೆ ಇದ್ದು, ಇದರಿಂದ ಅದು ಸಂಪೂರ್ಣ ಕೊಳೆತ ಸ್ಥಿತಿಗೆ ತಲುಪಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಮೃತ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತಳು ಸ್ಥಳೀಯ ನಿವಾಸಿನಾ ಅಥವಾ ಬೇರೆ ಪ್ರದೇಶದವರಾ ಎಂಬ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಅಗತ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯುವ ಸಾಧ್ಯತೆ ಇದೆ.

ಈ ಘಟನೆ ಸಹಜ ಸಾವು, ಆತ್ಮಹತ್ಯೆ ಅಥವಾ ಕೊಲೆ ಪ್ರಕರಣವೇ ಎಂಬ ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

ಸುತ್ತಮುತ್ತಲಿನ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ನಾಪತ್ತೆ ಪ್ರಕರಣಗಳ ಮಾಹಿತಿಯನ್ನೂ ಪರಿಶೀಲಿಸಲಾಗುತ್ತಿದೆ.

ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯ ಗುರುತು ಪತ್ತೆ ಹಾಗೂ ಸಾವಿನ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande