ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಮತ್ತಷ್ಟು ಅಗ್ಗ, ಬೆಳ್ಳಿ ದರ ಯಥಾಸ್ಥಿತಿ
ನವದೆಹಲಿ, 15 ಜುಲೈ (ಹಿ.ಸ.): ಆ್ಯಂಕರ್: ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಬುಧವಾರ ಚಿನ್ನದ ದರದಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದ್ದು, ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಚೆನ್ನೈ ಹೊರತುಪಡಿಸಿ ದೇಶದ ಬಹುತೇಕ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ದರವು 10 ಗ್ರಾಂಗೆ ₹100ರಿಂದ ₹110ರವರೆಗೆ
ಸಾಂಕೇತಿಕ


ನವದೆಹಲಿ, 15 ಜುಲೈ (ಹಿ.ಸ.):

ಆ್ಯಂಕರ್:

ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಬುಧವಾರ ಚಿನ್ನದ ದರದಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದ್ದು, ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಚೆನ್ನೈ ಹೊರತುಪಡಿಸಿ ದೇಶದ ಬಹುತೇಕ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ದರವು 10 ಗ್ರಾಂಗೆ ₹100ರಿಂದ ₹110ರವರೆಗೆ ಇಳಿಕೆಯಾಗಿದೆ. ಚೆನ್ನೈನಲ್ಲಿ ಮಾತ್ರ ₹500ರಿಂದ ₹540ರವರೆಗೆ ಕುಸಿತ ದಾಖಲಾಗಿದೆ.

ದರ ಇಳಿಕೆಯ ಬಳಿಕ 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹1,42,790ರಿಂದ ₹1,43,450ರವರೆಗೆ ಹಾಗೂ 22 ಕ್ಯಾರೆಟ್ ಚಿನ್ನ ₹1,30,890ರಿಂದ ₹1,31,490ರವರೆಗೆ ಮಾರಾಟವಾಗುತ್ತಿದೆ. ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಇಲ್ಲದ ಕಾರಣ, ದೆಹಲಿಯಲ್ಲಿ ಪ್ರತಿ ಕಿಲೋಗ್ರಾಂ ಬೆಳ್ಳಿ ₹2,34,900ಕ್ಕೆ ಸ್ಥಿರವಾಗಿದೆ.

ದೆಹಲಿ, ಮುಂಬೈ, ಅಹಮದಾಬಾದ್, ಕೊಲ್ಕತ್ತಾ, ಜೈಪುರ, ಲಖನೌ, ಪಾಟ್ನಾ ಸೇರಿದಂತೆ ಪ್ರಮುಖ ನಗರಗಳಲ್ಲೂ ಚಿನ್ನದ ದರದಲ್ಲಿ ಇಳಿಕೆ ಕಂಡುಬಂದಿದೆ. ಬೆಂಗಳೂರು, ಹೈದರಾಬಾದ್ ಹಾಗೂ ಭುವನೇಶ್ವರದಲ್ಲಿಯೂ 24 ಕ್ಯಾರೆಟ್ ಚಿನ್ನ 10 ಗ್ರಾಂಗೆ ₹1,42,790 ಹಾಗೂ 22 ಕ್ಯಾರೆಟ್ ಚಿನ್ನ ₹1,30,890ಕ್ಕೆ ವಹಿವಾಟು ನಡೆಸುತ್ತಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande