ಧಾರವಾಡದಲ್ಲಿ ವೈದ್ಯನ ಬರ್ಬರ ಹತ್ಯೆ: ಪತ್ನಿ ಮೇಲೆ ಶಂಕೆ
ಧಾರವಾಡ, 15 ಜುಲೈ (ಹಿ.ಸ.): ಆ್ಯಂಕರ್: ಹುಬ್ಬಳ್ಳಿಯ ಚಿರಾಯು ಆಸ್ಪತ್ರೆಯ ಅನಸ್ತೇಶಿಯಾ ತಜ್ಞ ವೈದ್ಯ ಡಾ. ಕಿರಣ್ ಹೊನ್ನಣ್ಣನವರ್ ಅವರನ್ನು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ರಸ್ತೆಯ ರನ್ಕಾಸ್ಟೆಲ್ಲೋ ಅಪಾರ್ಟ್‌ಮೆಂಟ್‌ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಘಟನೆಯಲ್ಲಿ ಅವರ 10 ವರ್ಷದ ಮಗನ
ಕೊಲೆಯಾದ ವೈದ್ಯ ಕಿರಣ ಸಂಗ್ರಹ ಚಿತ್ರ


ಧಾರವಾಡ, 15 ಜುಲೈ (ಹಿ.ಸ.):

ಆ್ಯಂಕರ್:

ಹುಬ್ಬಳ್ಳಿಯ ಚಿರಾಯು ಆಸ್ಪತ್ರೆಯ ಅನಸ್ತೇಶಿಯಾ ತಜ್ಞ ವೈದ್ಯ ಡಾ. ಕಿರಣ್ ಹೊನ್ನಣ್ಣನವರ್ ಅವರನ್ನು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ರಸ್ತೆಯ ರನ್ಕಾಸ್ಟೆಲ್ಲೋ ಅಪಾರ್ಟ್‌ಮೆಂಟ್‌ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಘಟನೆಯಲ್ಲಿ ಅವರ 10 ವರ್ಷದ ಮಗನ ಮೇಲೂ ಹಲ್ಲೆ ನಡೆದಿದ್ದು, ಗಾಯಗೊಂಡ ಬಾಲಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆ ಸಂಬಂಧ ಡಾ. ಕಿರಣ್ ಅವರ ಪತ್ನಿ ಹಾಗೂ ನೇತ್ರ ತಜ್ಞೆ ಡಾ. ಪ್ರಿಯಾ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಪತ್ನಿಯ ಮೇಲೆಯೇ ಶಂಕೆ ವ್ಯಕ್ತವಾಗಿದ್ದು, ಪತಿಯನ್ನು ಕೊಂದ ಬಳಿಕ ಮಗನ ಮೇಲೂ ಹಲ್ಲೆ ನಡೆಸಿ, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಸಾಧ್ಯತೆ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಬಂಧಿಕರು ಮನೆಗೆ ಬಂದಾಗ ಡಾ. ಕಿರಣ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದ್ದು, ಗಾಯಗೊಂಡ ಬಾಲಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಾರ್ಟ್‌ಮೆಂಟ್‌ಗೆ ಕಟ್ಟುನಿಟ್ಟಿನ ಭದ್ರತೆ ಇರುವ ಹಿನ್ನೆಲೆಯಲ್ಲಿ ಹೊರಗಿನ ವ್ಯಕ್ತಿಯ ಕೃತ್ಯವಾಗಿರುವ ಸಾಧ್ಯತೆ ಕಡಿಮೆ ಎಂದು ಪೊಲೀಸ ಆಯುಕ್ತರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಡಾ. ಪ್ರಿಯಾ ಆಘಾತದ ಸ್ಥಿತಿಯಲ್ಲಿದ್ದು, ವಿವಿಧ ರೀತಿಯ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ ಎಂದು ಆಯುಕ್ತ ಶಶಿಕುಮಾರ್ ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande