
ಚಿತ್ರದುರ್ಗ, 17 ಜುಲೈ (ಹಿ.ಸ.):
ಆ್ಯಂಕರ್:ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಂಸದ ಗೋವಿಂದ ಕಾರಜೋಳ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.
ಸಭೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುತ್ತಿರುವ ಕುರಿತು ಹಾಗೂ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಸ್ಥಿತಿಗತಿಯನ್ನು ಸುದೀರ್ಘವಾಗಿ ಪರಿಶೀಲಿಸಲಾಯಿತು.
ಯೋಜನೆಗಳು ನಿಗದಿತ ಅವಧಿಯೊಳಗೆ ಪೂರ್ಣಗೊಂಡು ಸಾರ್ವಜನಿಕರಿಗೆ ಪ್ರಯೋಜನವಾಗುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಂಸದ ಗೋವಿಂದ ಕಾರಜೋಳ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ), ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.