ಜಮಖಂಡಿ ಶಾಸಕ ಜಗದೀಶ್ ಗುಡಗುಂಟೆ ಜನತಾ ದರ್ಶನ
ಬಾಗಲಕೋಟೆ, 17 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕ್ಷೇತ್ರದ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯನ್ನು ಸಾಧಿಸುವುದು ತಮ್ಮ ಮೊದಲ ಆದ್ಯತೆಯಾಗಿದೆ ಎಂದು ಜಮಖಂಡಿ ಶಾಸಕ ಜಗದೀಶ್ ಗುಡಗುಂಟೆ ಹೇಳಿದರು. ಜಮಖಂಡಿ ನಗರದಲ್ಲಿ ಆಯೋಜ
ಅಹವಾಲು


ಬಾಗಲಕೋಟೆ, 17 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ

ಜಮಖಂಡಿ ಕ್ಷೇತ್ರದ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯನ್ನು ಸಾಧಿಸುವುದು ತಮ್ಮ ಮೊದಲ ಆದ್ಯತೆಯಾಗಿದೆ ಎಂದು ಜಮಖಂಡಿ ಶಾಸಕ ಜಗದೀಶ್ ಗುಡಗುಂಟೆ ಹೇಳಿದರು.

ಜಮಖಂಡಿ ನಗರದಲ್ಲಿ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಸಾರ್ವಜನಿಕರು, ರೈತರು, ಮಹಿಳೆಯರು ಹಾಗೂ ಯುವಕರು ಭಾಗವಹಿಸಿ ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳು, ಅಭಿವೃದ್ಧಿ ಕಾಮಗಾರಿಗಳ ಬೇಡಿಕೆಗಳು, ಮೂಲಸೌಕರ್ಯ ಕೊರತೆ, ಕುಡಿಯುವ ನೀರು, ರಸ್ತೆ, ವಿದ್ಯುತ್, ನೀರಾವರಿ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಶಾಸಕರ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಪ್ರತಿಯೊಬ್ಬರ ಅಹವಾಲುಗಳನ್ನು ಅತ್ಯಂತ ತಾಳ್ಮೆಯಿಂದ ಆಲಿಸಿದ ಶಾಸಕ ಜಗದೀಶ್ ಗುಡಗಿಂಟಿ, ಸ್ಥಳದಲ್ಲೇ ಉಪಸ್ಥಿತರಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು. ಪರಿಹರಿಸಬಹುದಾದ ಅಹವಾಲುಗಳನ್ನು ತಕ್ಷಣವೇ ಇತ್ಯರ್ಥಗೊಳಿಸಲು ಹಾಗೂ ಉಳಿದ ಸಮಸ್ಯೆಗಳನ್ನು ನಿಗದಿತ ಅವಧಿಯೊಳಗೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಾರ್ವಜನಿಕರು ಯಾವುದೇ ಸಮಸ್ಯೆ ಎದುರಾದರೂ ನಿರ್ಭಯವಾಗಿ ತಮ್ಮನ್ನು ಸಂಪರ್ಕಿಸಬಹುದು. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಜನಪ್ರತಿನಿಧಿಯಾಗಿ ಕಾರ್ಯನಿರ್ವಹಿಸುವುದು ತಮ್ಮ ಕರ್ತವ್ಯವಾಗಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವ ಜೊತೆಗೆ ಪ್ರತಿಯೊಂದು ಹಳ್ಳಿಯ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಕ್ಷೇತ್ರದ ರೈತರ ಸಮಸ್ಯೆಗಳು, ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಸರ್ಕಾರಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಸಾರ್ವಜನಿಕರ ನಿರೀಕ್ಷೆಗಳಿಗೆ ಅನುಗುಣವಾಗಿ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಜನಸ್ನೇಹಿಯಾಗಿ ರೂಪಿಸಲು ನಿರಂತರ ಪ್ರಯತ್ನಿಸಲಾಗುವುದು ಎಂದು ಶಾಸಕರು ಹೇಳಿದರು.

ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಲ್ಲಿಕೆಯಾಗಿರುವ ಪ್ರತಿಯೊಂದು ಅಹವಾಲಿನ ಕುರಿತು ಅಧಿಕಾರಿಗಳು ಗಂಭೀರವಾಗಿ ಕ್ರಮ ಕೈಗೊಂಡು ಜನರಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂದು ಅವರು ನಿರ್ದೇಶಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande